Breaking News

ಸರ್ಕಾರದ ವಿರುದ್ಧ ಮಳೆ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ

Spread the love

ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವ ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

 

ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ಗಾಂಧಿ ಪ್ರತಿಮೆ ಮುಂಭಾಗ ಜಮಾವಣೆಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಸಚಿವ ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್, ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ, ಪ್ರತಿಭಟನೆಯಲ್ಲಿ ಸಚಿವರ ಡಾ.ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಎಂ.ಸಿ. ಸುಧಾಕರ್, ಶಾಸಕ ಶರತ್ ಬಚ್ಚೇಗೌಡ, ಕೆ.ವೈ. ನಂಜೇಗೌಡ, ತನ್ವೀರ್ ಸೇಠ್, ಯು.ಬಿ. ವೆಂಕಟೇಶ್, ಪ್ರಕಾಶ್ ರಾಥೋಡ್ ಸೇರಿದಂತೆ ಕೈ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕೈ ನಾಯಕರು, ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ”ರಾಜ್ಯ ಆರ್ಥಿಕ ಪ್ರಗತಿಗೆ ದಾರಿ ದೀಪವಾದ ಬಜೆಟ್ ಆಗಲಿದೆ. ಬಸವಣ್ಣನವರ ತತ್ವದ ಸರ್ವರಿಗೂ ಸಮಪಾಲು ಇದೆ. ಎಲ್ಲರನ್ನೂ ಸಮಾಜದ ಮುಖ್ಯವಾಹಿನಿಗೆ ತರುವ ಬಜೆಟ್ ಇದಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಜೆಟ್​ನಲ್ಲಿ ಒತ್ತು ನೀಡಲಾಗಿದೆ. ಬಜೆಟ್ ಇನ್ನೂ ಅನುಷ್ಠಾನ ಆಗಿಲ್ಲ. ಆಗಲೇ ಬೋಗಸ್ ಬಜೆಟ್ ಅಂತ ಬಿಜೆಪಿಯವರು ಹೇಳ್ತಿದಾರೆ. ವಿಶ್ಲೇಷಣೆಗಿಂತ ತಮ್ಮ ಪಕ್ಷದ ಚಟುವಟಿಕೆಗಳ ಬಗ್ಗೆ ಗಮನ ನೀಡಿ. ಬಜೆಟ್ ನಡೀದಿತಿದೆ. ಪ್ರತಿ ಪಕ್ಷದ ನಾಯಕರ ಆಯ್ಕೆ ಆಗಿಲ್ಲ” ಎಂದು ಹೇಳಿದರು.

”ಬಿಜೆಪಿಯವರು ವಲಯವಾರು ಅನುದಾನ ನೀಡ್ತಿದ್ರು, ನಾವು ಇಲಾಖೆವಾರು ಅನುದಾನ ನೀಡಿದ್ದೇನೆ. ಜಲಜೀವನ್ ಮಿಷನ್​ನಲ್ಲಿ ಕನ್ನಡಿಗರ ದುಡ್ಡು ಇದೆ. ಥರ್ಡ್ ಪಾರ್ಟಿ ಆಡಿಟಿಂಗ್​ಗೆ ಸಿದ್ಧವಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಜೆಟ್ ತಲುಪುತ್ತಿದೆ. ಐಟಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ ಎಲ್ಲಾ ಇಲಾಖೆಗಳಿಗೆ ಯೋಜನೆ ಇದೆ. ನಾನು ಸಚಿವರಾಗಿ 100 ಯೋಜನೆಗಳಗೆ ಕೇಳಿರುತ್ತೇವೆ. ಅದರಲ್ಲಿ 60 ರಷ್ಟು ಆಗುತ್ತವೆ. ಐದು ಗ್ಯಾರಂಟಿಗಳು ಜಾರಿ ಮಾಡಬೇಕು. ಇದರಿಂದ ನಾಲ್ಕು ಕೋಟಿ ಜನರಿಗೆ ಅನುಕೂಲ ಆಗಲಿದೆ” ಎಂದರು


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ