Breaking News

ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ: ನಿರಾಣಿ

Spread the love

ಬೆಳಗಾವಿ : ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ.

ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ ಘೋಷಣೆ ಮಾಡಿದರೂ ಅದನ್ನು ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ: ನೀವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿನಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ. ಪಕ್ಷದ ಸಂಘಟನೆಯಲ್ಲಿ ನಾನಿರುತ್ತೇನೆ. ರಾಜ್ಯಾಧ್ಯಕ್ಷನಾಗಿಯೇ ಪಕ್ಷ ಸಂಘಟನೆ ಮಾಡಬೇಕು ಅಂತಾ ಏನೂ ಇಲ್ಲ. ಬೆಳಗಾವಿ ವಿಭಾಗದಲ್ಲಿ ಯಾವುದೇ ಹುದ್ದೆಯನ್ನು ತೆಗೆದುಕೊಳ್ಳದೆಯೇ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿ, ವೈಯಕ್ತಿಕವಾಗಿ ನನಗೆ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಆಸಕ್ತಿ ಇದೆ. ರಾಜ್ಯ, ರಾಷ್ಟ್ರ ನಾಯಕರು ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾನು ಬದ್ಧ. ನನಗೆ ವೈಯಕ್ತಿಕವಾಗಿ ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಇದೆ. ಎಲ್ಲಿ ಕಳೆದುಕೊಂಡಿದ್ದೇನೆ, ಅಲ್ಲೇ ಹುಡುಕುವ ಸ್ವಭಾವ ನನ್ನದು. ಸೋಲು ಗೆಲುವು ಸ್ವಾಭಾವಿಕ. ಇಂದಿರಾ ಗಾಂಧಿ, ವಾಜಪೇಯಿ, ಅಡ್ವಾಣಿ, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಎಲ್ಲರೂ ಸೋತವರೇ ಇದ್ದಾರೆ. ನಾನು ಇವತ್ತು ಸೋತಿರಬಹುದು. ಆದರೆ ಇವತ್ತೇ ಚುನಾವಣೆ ನಡೆದರೂ 25 ಸಾವಿರ ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ‌. ಇನ್ನು ನನ್ನ ಸೋಲಿಗೆ ನಾನೇ ಕಾರಣ, ನನ್ನ ಅತಿಯಾದ ಆತ್ಮವಿಶ್ವಾಸದಿಂದ ನನಗೆ ಸೋಲಾಗಿದೆ ಎಂದು ನಿರಾಣಿ ಹೇಳಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ