ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಂದುವರೆದು ಮಾತನಾಡಿದ ಅವರು ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Laxmi News 24×7