ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.
Laxmi News 24×7