ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
Laxmi News 24×7