Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ

ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ ಆಗಿರುವ ಹಾಸನ್ ದಲಾಯಿ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ,ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿಗಳು ಕಾಣೆಯಾಗಿರುವ ಕುರಿತು ನಮಗೆ ಜುಲೈ 7 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಆಶ್ರಮದ ಟ್ರಸ್ಟನ್ ಸದಸ್ಯರು, ಜೈನ ಸಮಾಜದ ಶ್ರಾವಕರು ದೂರು ದಾಖಲಿಸಿದ್ದರು. ಜೈನ ಶ್ರಾವಕರ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೆವು. ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ ತನಿಖೆ ಶುರು ಮಾಡಿದ್ದೆವು. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬುದರ ಬಗ್ಗೆ ವಿಚಾರಣೆ ನಡೆಸಲಾಯಿತು. ತಕ್ಷಣವೇ ಸ್ವಾಮೀಜಿ ಅವರ ಜೊತೆ ಗುರುತಿಸಿಕೊಂಡಿದ್ದ ಒಬ್ಬನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದೆವು, ಆಗ ಸ್ವಾಮೀಜಿ ಅವರ ಕೊಲೆ ಆಗಿರುವುದು ಬೆಳಕಿಗೆ ಬಂದಿತು ಎಂದು ವಿವರಿಸಿದರು.

9 ಭಾಗಗಳನ್ನಾಗಿ ಕತ್ತರಿಸಿದ್ದಆರೋಪಿಗಳು: ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ 9 ಭಾಗಗಳನ್ನಾಗಿ ತುಂಡು ಮಾಡಲಾಗಿದೆ. ಎರಡು ಕೈ, ಎರಡು ಕಾಲು, ಎರಡು ಭಾಗ ತೊಡೆ, ತಲೆಯ ಎರಡು ಭಾಗ, ಹೊಟ್ಟೆ ಪ್ರತ್ಯೇಕವಾಗಿ ಕತ್ತರಿಸಿರುವ ಕ್ರೂರಿಗಳು ಜೈನಮುನಿಗಳ ಹತ್ಯೆ ಮಾಡಿ ಮೃತದೇಹ ಪೀಸ್ ಪೀಸ್ ಮಾಡಿ ಹಂತಕರು ಕೊಳವೆ ಬಾವಿಗೆ ಎಸೆದಿದ್ದರು. ಆರೋಪಿಗಳು ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ ಬಳಿಕ ನುರಿತ ತಂಡದೊಂದಿಗೆ ರಾಯಭಾಗ ತಾಲೂಕಿನ ಕಟಕಬಾವಿ ಗ್ರಾಮದ ಕೊಳವೆ ಬಾವಿಯಿಂದ ಜೈನ್ ಮುನಿಗಳ ಶವನ್ನು ಹೊರಕ್ಕೆ ತೆಗೆಯಲಾಯಿತು. 30 ಫೂಟ್ ಆಳದಲ್ಲಿ ನಮಗೆ ಶ್ರೀಗಳ ಮೃತದೇಹ ಪತ್ತೆಯಾಗಿದೆ, ಶ್ರೀಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಪ್ರಕರಣ ತನಿಖೆ ಮುಂದುವರಿದಿದೆ ಎಂದು ಎಸ್​​​​ಪಿ ಪ್ರಕರಣದ ಮಾಹಿತಿ ನೀಡಿದರು.

ಜೈನ ಮುನಿ ಹತ್ಯೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಖಂಡನೆ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಹಿಂಸೆಯನ್ನು ಬೋಧಿಸುವ ಜೈನ ಧರ್ಮ ಇಡೀ ಮನುಕುಲಕ್ಕೆ ಆದರ್ಶವಾಗಿದೆ. ಅಂತಹ ಧರ್ಮದ ಮುನಿಗಳನ್ನು ಹತ್ಯೆ ಮಾಡಿರುವುದು ತೀವ್ರ ನೋವನ್ನು ಉಂಟು ಮಾಡಿದೆ. ಜೈನ ಶ್ರಾವಕರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವಂತಾಗಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ