ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.
ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೈನ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.
ಹೌದು.. ಜೈನ ಮುನಿಗಳನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲದೇ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಜೈನ ಸಮುದಾಯದವರ ಆಕ್ರೋಶದ ಕಟ್ಟೆ ಒಡೆದು ಹೋಗಿದೆ. ಈ ಘಟನೆ ಖಂಡಿಸಿ ಜೈನ ಮುನಿಗಳಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮಹಾರಾಜರ ನೇತೃತ್ವದಲ್ಲಿ ಸುವರ್ಣ ವಿಧಾನಸೌಧ ಮುಂದೆ ರಾಷ್ಟ್ರೀಯ ಹೆದ್ದಾರಿ ತಡೆದು ಜೈನ ಸಮಾಜದವರು ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
Laxmi News 24×7