Breaking News

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.

Spread the love

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.

ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೈನ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.

ಹೌದು.. ಜೈನ ಮುನಿಗಳನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲದೇ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಜೈನ ಸಮುದಾಯದವರ ಆಕ್ರೋಶದ ಕಟ್ಟೆ ಒಡೆದು ಹೋಗಿದೆ. ಈ ಘಟನೆ ಖಂಡಿಸಿ ಜೈನ ಮುನಿಗಳಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮಹಾರಾಜರ ನೇತೃತ್ವದಲ್ಲಿ ಸುವರ್ಣ ವಿಧಾನಸೌಧ ಮುಂದೆ ರಾಷ್ಟ್ರೀಯ ಹೆದ್ದಾರಿ ತಡೆದು ಜೈನ ಸಮಾಜದವರು ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ