Breaking News
Home / ಜಿಲ್ಲೆ / ಬೆಳಗಾವಿ / ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್

ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್

Spread the love

ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು.

ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.

ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ, ಭಯ ಪಡುವ ಅವಶ್ಯಕತೆ ಇಲ್ಲ: ಹೆಚ್ ಕೆ ಪಾಟೀಲ್

ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ ಪಂಚತರಣಿ ಬೇಸ್ ಕ್ಯಾಂಪ್​ನಲ್ಲಿ ಅವರೆಲ್ಲರೂ ಕಳೆದರಡು ದಿನಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಅಲ್ಲಿರುವ ಯಾರಿಗೂ ಯಾವುದೇ ತೊಂದರೆ ಇಲ್ಲ. ಹಾಗಾಗಿ ಯಾರೂ ಭಯ ಪಡುವಂತ ಅವಶ್ಯಕತೆ ಇಲ್ಲ. ಯಾತ್ರಾರ್ಥಿಗಳಿಗೆ ಮೆಡಿಕಲ್ ಹಾಗೂ ಹಾಸಿಗೆ ಹೊದಿಕೆ ನೀಡಿ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ತಿಳಿಸಿದರು.

 ರಾಜ್ಯದ ಅಮರನಾಥ ಯಾತ್ರಿಕರುಭಾನುವಾರ ಬೆಳಗ್ಗೆ ತೊಂದರೆಯಲ್ಲಿದ್ದ ವಿನೋದ ಅನ್ನುವವರ ಜತೆ ನಾನು ಮಾತನಾಡಿದ್ದೇನೆ. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿ ರಶ್ಮಿ ಮಹೇಶ ಈ ಪ್ರಕರಣ ನಿರ್ವಹಿಸುತ್ತಿದ್ದಾರೆ. ಇನ್ನೋರ್ವ ಹಿರಿಯ ಅಧಿಕಾರಿ ಸುನೀಲ್​ ಕುಮಾರ್​ ಶ್ರೀನಗರ ತಲುಪಿದ್ದಾರೆ. ನಾಲ್ಕೈದು ದಿನಗಳಲ್ಲಿ ಅವರೆಲ್ಲರೂ ರಾಜ್ಯಕ್ಕೆ ಸೇಫ್ ಆಗಿ ಮರಳಿ ಬರುತ್ತಾರೆ‌ ಎಂದು ಹೆಚ್.ಕೆ.ಪಾಟೀಲ್​ ಭರವಸೆ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ