Breaking News

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶರಾಗಿದ್ದಾರೆ.

Spread the love

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ.

ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ.

ಸಿ.ಎಂ.ನಿಂಬಣ್ಣವರ್​ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ‌.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ