Breaking News

ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

Spread the love

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ ಹಿರೇಕೋಡಿ ಆಶ್ರಮಕ್ಕೆ ತರಲಾಗುವುದು ಎಂದು ತಿಳಿಸಿದರು.

ಜೀನಸೇನಾ ಭಟ್ಟಾರಕ ಮಹಾರಾಜರು ಬಂದ ಬಳಿಕ ಅಂತ್ಯಕ್ರಿಯೆ ನಡೆಯುವ ಸ್ಥಳ ನಿರ್ಣಯ ಮಾಡುತ್ತಾರೆ. ಜೈನ ಧರ್ಮದ ಹಿರಿಯರ ನಿರ್ದೇಶನದಂತೆ ಅಂತ್ಯಕ್ರಿಯೆ ನಡೆಯಲಿದೆ. ಆಶ್ರಮದ ಆವರಣದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಅಂತಿಮ ಕ್ರಿಯೆಯಲ್ಲಿ ಯಾವುದೇ ತೊಂದರೆ ಆಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಠದ ಆವರಣದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿತರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಹತ್ಯೆ ಮಾಡಿದ ಆರೋಪಿತರಾದ ನಾರಾಯಣ ಮಾಳಿ ಹಾಗೂ ಹಸನ್ ದಾಲಾಯತ್ ಎಂಬಿಬ್ಬರನ್ನು ವಿಚಾರಣೆ ನಡೆಸಲಾಗುತ್ತಿದೆ. ಈವರೆಗೆ ಹಲವು ಪ್ರಕರಣವನ್ನು ನಿರ್ಭೀತಿಯಿಂದ ತನಿಖೆ ಮಾಡಿಕೊಂಡು ಬಂದಿದ್ದೇವೆ. ಅದಕ್ಕಿಂತ ಹೆಚ್ಚಿನ ಮುತುವರ್ಜಿ ವಹಿಸಿ ಈ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ