Breaking News

ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ:

Spread the love

ಬೆಳಗಾವಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಶುಕ್ರವಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಯಮಕನಮರಡಿ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ

Spread the love ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ