Breaking News

ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ

Spread the love

ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈ‌ನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. ಬಳಿಕ ಕೆಲವೊತ್ತು ಮಾತುಕತೆ ನಡೆಸಿ ಆಮರಣ ಉಪವಾಸ ಕೈಬಿಡುವಂತೆ ತಿಳಿಸಿದರು.

ಬಳಿಕ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದೆ. ಇದು ಇತಿಹಾಸದಲ್ಲಿ ನೋಡದ ಹತ್ಯೆಯಾಗಿದೆ. ಈಗಾಗಲೇ ಆರೋಪಗಳನ್ನು ಬಂಧನ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ DYSP ನೇತೃತ್ವದಲ್ಲಿ ತನಿಖೆ ಆಗುತ್ತಿದೆ. ತನಿಖೆಯ ಬಳಿಕ ಇನ್ನು ಕೆಲ ವಿಚಾರಗಳು ಬಯಲಿಗೆ ಬರಬಹುದು. ಇದು ಯಾರ ವೈಫಲ್ಯದಿಂದ ನಡೆದ ಘಟನೆಯಲ್ಲ ಎಂದರು.

ವರೂರಿನ ನವಗ್ರಹ ಕ್ಷೇತ್ರದ ಗುಣಧರನಂದಿ ಮಹಾರಾಜರು ಹತ್ಯೆ ಖಂಡಿಸಿ ಉಪವಾಸ ನಡೆಸುತ್ತಿದ್ದರು, ಇದನ್ನು ನಮ್ಮ ಜಿಲ್ಲಾಧ್ಯಕ್ಷರು ನಮ್ಮ ಗಮನಕ್ಕೆ ತಂದಿದ್ದರು. ಕೂಡಲೇ ನಾನು ಸ್ವಾಮೀಜಿ ಜೊತೆ ಮಾತನಾಡಿ ವಿನಂತಿ ‌ಮಾಡಿಕೊಂಡಿದ್ದೇನೆ. ಗೃಹ ಇಲಾಖೆಯ ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ. ನಾನು ನಿಮ್ಮ ಜೊತೆ ಇದ್ದೇವೆ, ಸರ್ಕಾರ ಜೈನ ಸಮುದಾಯದ ಜೊತೆ ಇರೋ ಭರವಸೆ ನೀಡಿದ್ದೇನೆ. ಸ್ವಾಮೀಜಿಗಳು ಉಪವಾಸ ಸತ್ಯಾಗ್ರಹವನ್ನು ನಿಲ್ಲಸಿದ್ದಾರೆ. ನಾನು ಅವರಿಗೆ ಆಭಾರಿ ಎಂದು ತಿಳಿಸಿದರು.

ಈ ಹಿಂದೆ ಕಾನೂನು ಸುವ್ಯವಸ್ಥೆ ADGP ಕಳಸಿಕೊಟ್ಟಿದ್ದೆ, ಅವರು ನಮಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಪರವಾಗಿ ಸ್ವಾಮೀಜಿ ಅವರಿಗೆ ಭರವಸೆ ಕೊಟ್ಟಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಕರೆ ಮಾಡಿ ವಿಚಾರಿಸಿದ್ರು. ಸ್ವಾಮೀಜಿ ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು ಎಂದು ತಿಳಸಿದ್ದಾರೆ. ಜೈನ ಸಮುದಾಯದ ಸಂಘ ಸಂಸ್ಥೆಗಳ ಲಿಖಿತ ರೂಪದಲ್ಲಿ ತಿಳಿಸಿದ್ರೆ ನಾವು ರಕ್ಷಣೆ ಕೊಡುತ್ತಿದ್ದೇವೆ. ಅದರಂತೆ ಇನ್ನು ಹೆಚ್ಚಿನ ರಕ್ಷಣೆ ಕೊಡುತ್ತೇವಿ. ಅವರು ತಂಗೋ ಜಾಗ ಅಧಿಕೃತ ಆಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿ ಶಾಲಾ ಕಾಲೇಜುಗಳಲ್ಲಿ ಉಳಿದುಕೊಳುತ್ತಾರೆ. ಈ ವಿಚಾರವಾಗಿ ನಾನು ಸಚಿವ ಮಧು ಬಂಗಾರಪ್ಪ ಜೊತೆ ಮಾತಾಡುತ್ತೇನಿ, ಜೈನ ಮಂಡಳಿ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಿಂದೂಳಿದ ವರ್ಗಗಳ ಮಂಡಳಿ ನಿಮಗ ಇದೆ. ಅದರಂತೆ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜೈನ ಸಮುದಾಯದ ಮಂಡಳಿ ಮಾಡೋಕೆ ಕ್ರಮ ನಿರ್ದಾರ. ಬಜೆಟ್ ಮೊದಲೆ ಆಗಿದ್ದರೆ ನಾವು ಪ್ರಕಟಣೆ ಮಾಡುತ್ತಿದ್ದೇವು. ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ