Breaking News
Home / ರಾಜ್ಯ / ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆ

ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆ

Spread the love

ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ.

ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ.

ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ.

ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ತೀವ್ರ ತಪಾಸಣೆಗೊಳಪಡಿಸುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಕಂಡುಬಂದಿದೆ. ವಿಧಾನಸೌಧದ ಪೂರ್ವ ಬಾಗಿಲಿನ ಮೂಲಕ ಈ ಮಹಿಳೆ ಒಳ ಪ್ರವೇಶಿಸಿದ್ದರು. ದ್ವಾರದಲ್ಲೇ ಇರುವ ಬ್ಯಾಗೇಜ್ ಸ್ಕ್ಯಾನಿಂಗ್ ಮಷಿನ್​ನಲ್ಲಿ ಇವರ ಬ್ಯಾಗ್​ಅನ್ನು ಸ್ಕ್ಯಾನಿಂಗ್​ಗೆ ಒಳಪಡಿಲಾಗಿತ್ತು. ಈ ವೇಳೆ ಅದರಲ್ಲಿ ಚಾಕು ಇರುವುದನ್ನು ಸ್ಕ್ಯಾನಿಂಗ್ ಸ್ಕ್ರೀನ್ ನಲ್ಲಿ ಭದ್ರತಾ ಸಿಬ್ಬಂದಿ ನೋಡುತ್ತಾರೆ. ಕೂಡಲೇ ಆ ಬ್ಯಾಗ್ ಅನ್ನು ಪರಿಶೀಲಿಸಿ, ಅದರಲ್ಲಿದ್ದ ವಸ್ತುಗಳನ್ನು ಹೊರಹಾಕಿ ಚಾಕುವನ್ನು ವಶಪಡಿಸಿಕೊಳ್ಳುತ್ತಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ