Breaking News

ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು

Spread the love

ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ ಅವಕಾಶ ಕಲ್ಪಿಸಿ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಲುವಳಿ ಸೂಚನೆ ಮಂಡಿಸಿ ನಿಯಮ 59ರ ಅಡಿ ಚರ್ಚೆಗೆ ಅವಕಾಶ ಕೋರಿದರು. ನಿಯಮ 68ಕ್ಕೆ ಮಾರ್ಪಾಡು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಚರ್ಚೆಗೆ ಅವಕಾಶ ನೀಡಿದರು. ಜೈನ ಮುನಿಗಳ ಹತ್ಯೆ ಘಟನೆ ಕುರಿತು ಸಮಗ್ರ ವಿವರ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಪ್ರಕರಣವನ್ನು ತಕ್ಷಣ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯ ಪ್ರಕಾಶ್ ಹುಕ್ಕೇರಿ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಎಲ್ಲ ರೀತಿಯ ಕ್ರಮ ವಹಿಸಿದೆ. ಹಾಗಾಗಿ ಸಿಬಿಐಗೆ ಕೊಡುವ ಅಗತ್ಯವಿಲ್ಲ, ನಮ್ಮ ಪೊಲೀಸರು ಸಮರ್ಥರಿದ್ದಾರೆ, ಈಗಾಗಲೇ ಆರೋಪಿಗಳ ಬಂಧಿಸಿದ್ದಾರೆ ಎಂದು ಪ್ರಕರಣವನ್ನು ಸಿಬಿಐಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ಸಿಬಿಐ ತನಿಖೆಗೆ ಆಗ್ರಹ: ಬಿಜೆಪಿ ಸದಸ್ಯ ರವಿಕುಮಾರ್ ಮಾತನಾಡಿ, ಸರಳ ಶ್ರೀಗಳು, ದಿನಕ್ಕೆ ಒಂದು ಬಾರಿ ಮಾತ್ರ ಆಹಾರ ಸೇವನೆ ಮಾಡುತ್ತಾರೆ. ಯಾವುದೇ ಆರ್ಥಿಕ ಚಟುವಟಿಕೆ ನಡೆಸಲ್ಲ, ಅಹಿಂಸೆಯನ್ನೇ ಮೈಗೂಡಿಸಿಕೊಂಡವರು. ಅವರ ಬರ್ಬರ ಹತ್ಯೆಯಿಂದ ಸಮಾಜ ತಲೆ ತಗ್ಗಿಸುವಂತಾಗಿದೆ. ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿದ್ದಾರೆ. ಸಾಲ ವಾಪಸ್ ಕೇಳಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ. ತನಿಖೆ ಮುಗಿಯುವ ಮೊದಲೇ ಏಕೆ ಹೇಳಬೇಕು? ತನಿಖೆ ಆಗಬೇಕಲ್ಲವೇ? ಪೂರ್ತಿ ಸತ್ಯ ಹೊರಬರಬೇಕಿದೆ. ಸತ್ಯ ಹೊರಬರಲು ಸಿಬಿಐ ತನಿಖೆ ಆಗಬೇಕಿದೆ ಎಂದು ಆಗ್ರಹಿಸಿದರು.

ಸದಸ್ಯ ವೈ ಎ ನಾರಾಯಣಸ್ವಾಮಿ ಮಾತನಾಡಿ, ಸ್ಥಳಕ್ಕೆ ಸರ್ಕಾರದ ಪ್ರತಿನಿಧಿಗಳು ಯಾಕೆ ಹೋಗಲಿಲ್ಲ, ನೋಡಿದರೆ ಗಂಭೀರವಾಗಿ ಪರಿಗಣಿಸಿಲ್ಲ ಎನ್ನುವುದು ಸ್ಪಷ್ಟವಾಗಲಿದೆ. ಬುಧವಾರ ಕಾಣೆಯಾಗಿದ್ದು, ಶನಿವಾರ ಮೃತದೇಹ ಪತ್ತೆಯಾಗಿದೆ. ಗೃಹ ಸಚಿವರು ಹೋಗಬೇಕಿತ್ತಲ್ಲವೇ? ಇವತ್ತು ಹೋಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದರು, ಇದು ಸಣ್ಣ ಪ್ರಕರಣ ಅಲ್ಲ, 6 ಲಕ್ಷಕ್ಕೆ ಕೊಲೆಯಾಗಿದ್ದರೆ ದೇಹವನ್ನು 9 ತುಂಡು ಮಾಡುತ್ತಿರಲಿಲ್ಲ. ಇಡೀ ದೇಶ ಕರ್ನಾಟಕದತ್ತ ನೋಡುತ್ತಿದೆ, ರಾಜ್ಯ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಸಿಬಿಐ ತನಿಖೆಗೆ ಕೊಡಿ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ