Breaking News

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.

Spread the love

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​.

ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಸತ್ಯರಾವ್ ಕೂಡ ಅದೇ ಕಟ್ಟಡದಲ್ಲಿ ಉಳಿದುಕೊಂಡಿದ್ದ. ಅಲ್ಲದೇ, ಸಂತ್ರಸ್ತ ಬಾಲಕಿ ಓದುತ್ತಿರುವ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸತ್ಯರಾವ್ ಕೆಲ ದಿನಗಳಿಂದ ಬಾಲಕಿಯ ಸ್ನೇಹ ಬೆಳೆಸಿಕೊಂಡು ಅತ್ಯಾಚಾರ ನಡೆಸಿದ್ದಾನೆ.

ವಿಡಿಯೋ ಮಾಡಿ ನಿರಂತರ ಬೆದರಿಕೆ: ಇದರ ಬಳಿಕ ಆಕೆಯೊಂದಿಗಿನ ಆತ್ಮೀಯ ಕ್ಷಣಗಳನ್ನು ವಿಡಿಯೋ ಮಾಡಿ, ಫೋಟೋ ತೆಗೆದುಕೊಂಡಿದ್ದಾನೆ. ಇದಾದ ಬಳಿಕವೂ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಲ್ಲದೇ, ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಾಯ್ಬಿಟ್ಟರೆ, ವಿಡಿಯೋ, ಚಿತ್ರಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಬಾಲಕಿ ಯಾರಿಗೂ ತನ್ನ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿರಲಿಲ್ಲ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ