Breaking News

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ

Spread the love

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅವರೇನು ಪುಕ್ಕಟ್ಟೆ ಅಕ್ಕಿ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ. ನಮ್ಮಿಂದ ತಗೋತಿದ್ದರು. ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಸಿಎಂ ಪ್ರಶ್ನಿಸಿದರು.

 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆಹಸಿದ ಹೊಟ್ಟೆಗೆ, ದುಡಿಯುವ ಕೈಗಳಿಗೆ ಶಕ್ತಿ-ಚೈತನ್ಯ ತುಂಬುವ ಸಲುವಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಮೊದಲು ಅಕ್ಕಿ ಕೊಡುವುದಾಗಿ ಒಪ್ಪಿಕೊಂಡಿದ್ದ ಕೇಂದ್ರ ಸರ್ಕಾರ ಏಕಾಏಕಿ ಬಂದ್ ಮಾಡಿದ್ದೇಕೆ? ಬಡವರು ಎರಡು ಹೊತ್ತು ಅನ್ನ ತಿಂದರೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಕೆ ಹೊಟ್ಟೆ ಕಿಚ್ಚು? ಎಂದು ಹರಿಹಾಯ್ದರು.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ಯಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ, ನೆಮ್ಮದಿಯ ಬದುಕು ನಿರ್ವಹಿಸಿ ಎಂದು ಜನತೆಗೆ ಕರೆ ನೀಡಿದರು.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ