Breaking News
Home / ಜಿಲ್ಲೆ / ಬೆಂಗಳೂರು / ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

Spread the love

ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ ರೂ.ಗೌರವಧನ ಕೊಡುತ್ತಿದೆ, ಇದರ ಜೊತೆಗೆ 5 ರಿಂದ 8 ಸಾವಿರ ಅವರ ಕೆಲಸದ ಆಧಾರದಲ್ಲಿ ಇನ್ಸೆಂಟಿವ್ ಸಿಗಲಿದೆ. ಇನ್ಸೆಂಟಿವ್​ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡರ ಪಾಲೂ ಇದೆ. ಆದರೆ, ಅವರಿಗೆ ಪಿಂಚಣಿ ನೀಡಲಾಗಲ್ಲ, ಅವರು ಖಾಯಂ ನೌಕರರಲ್ಲದ ಕಾರಣ ಅವರಿಗೆ ಪಿಂಚಣಿ ನೀಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಈಗಿರುವ ಪ್ರಕಾರ ಕೊಡಲು ಸಾಧ್ಯವೂ ಇಲ್ಲ. ಭವಿಷ್ಯದಲ್ಲಿ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಅವರ ಎಲ್ಲಾ ಸೇವೆಗೆ ಸಂಭಾವನೆ ಕೊಡಲಾಗುತ್ತಿದೆ. ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಆಶಾ ಕಾರ್ಯಕರ್ತೆಯರಿಗೆ ಸಿಗಲಿದೆ. ಅವರ ಕೆಲಸಕ್ಕೂ ಯೋಜನೆಗೂ ಸಂಬಂಧ ಇಲ್ಲ, ಅವರೆಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಹರಿದ್ದಾರೆ. ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಸ್ಮಾರ್ಟ್ ಫೋನ್ ಅವಶ್ಯಕತೆ ಬಗ್ಗೆ ಸದಸ್ಯರು ಗಮನ ಸೆಳೆದಿದ್ದಾರೆ ಹಾಗಾಗಿ ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ