Breaking News
Home / ನವದೆಹಲಿ / ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ

ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ

Spread the love

ನವದೆಹಲಿ : ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದುವರೆಗೂ ಸುಮಾರು 39ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ, ಭೂ ಕುಸಿತದಿಂದ ಅಪಾರ ಹಾನಿ ಉಂಟಾಗಿದೆ. ಉತ್ತರಾಖಂಡ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ವಿವಿಧೆಡೆ ಭಾರತೀಯ ಸೇನೆ ಮತ್ತು ಎನ್​ಡಿಆರ್​ಎಫ್​ ತಂಡಗಳು ಭರದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್​ ಮತ್ತು ಹರಿಯಾಣದಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ 7 ಮಂದಿ, ಉತ್ತರ ಪ್ರದೇಶದಲ್ಲಿ 3 ಮಂದಿ ಸೇರಿ ಒಟ್ಟು 39 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸುರಿದ ಭಾರಿ ಮಳೆಗೆ ಯಮುನಾ ನದಿ ತುಂಬಿ ಹರಿಯುತ್ತಿದ್ದು, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಪರದಾಡುವ ಪರಿಸ್ಥಿತಿ ಇದೆ.

ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ : ಉತ್ತರ ಭಾರತದಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 39 ಎನ್​ಡಿಆರ್​ಎಫ್​ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದರಲ್ಲಿ 14 ತಂಡಗಳು ಪಂಜಾಬ್​ನಲ್ಲಿ, 12 ತಂಡಗಳು ಹಿಮಾಚಲ, 8 ಉತ್ತರಾಖಂಡ್, ಹರ್ಯಾಣದಲ್ಲಿ 5 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ