Breaking News

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

Spread the love

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ನೀಡಿದೆ. ಮೊಬೈಲ್ಗಳು ಪದೇ ಪದೇ ರಿಪೇರಿ ಬರುತ್ತಿದ್ದು, ಸ್ವಂತ ಖರ್ಚಿನಲ್ಲಿ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ ನಮ್ಮ ಇಲಾಖೆಗೆ ನೀಡಿದ ಕೆಲಸವನ್ನು ಮೊಬೈಲ್ನಲ್ಲಿ ಮಾಡಲು ಕೊಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಬೇರೆ ಬೇರೆ ಇಲಾಖೆಗಳ ಕೆಲಸವನ್ನೂ ಇದೇ ಮೊಬೈಲ್ನಲ್ಲಿ ಮಾಡಲು ಹೇಳುತ್ತಿರುವುದರಿಂದ ನಮಗೆ ಕಿರಿಕಿರಿಯಾಗುತ್ತಿದೆ ಎಂದು ಅಂಗನವಾಡಿ ಶಿಕ್ಷಕಿಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಎಲ್ಲಾ ಶಿಕ್ಷಕಿಯರು ಗೊಬ್ಬರ ಚೀಲದಲ್ಲಿ ತಮ್ಮ ಮೊಬೈಲ್ಗಳನ್ನು ತುಂಬಿಕೊಂಡು ಬಂದು ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮರಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ