Breaking News

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ:ಸಚಿವ ವೆಂಕಟೇಶ್

Spread the love

ಬೆಂಗಳೂರು: ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ‌. ಆದರೆ, ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಉಳಿಸುವ ಕಾರಣಕ್ಕೆ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ, ಸಿಎಂ ಜೊತೆ ಚರ್ಚಿಸಿ ಎಷ್ಟು ಹೆಚ್ಚಳ ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

 

ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಅಮೂಲ್ ನಂದಿನಿ ವಿಲೀನ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ ಜೆಡಿಎಸ್ ಸದಸ್ಯ ಬೋಜೇಗೌಡ, ಅಮೂಲ್ ನವರು ಬಂದು ಇಲ್ಲಿ ಷಡ್ಯಂತ್ರ ಮಾಡಬಾರದು ಎಂದು ಹಲವು ಸಂಘಗಳು ಪ್ರತಿಭಟನೆ ಮಾಡಿವೆ. ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ ಅವರು, ಗೋಹತ್ಯೆ ಕಾಯ್ದೆ ಬಂತು, ನಂತರ ಜಿಲ್ಲೆಗಳಲ್ಲಿ ಗೋ ಶಾಲೆ ತೆರೆದರು. ಆದರೆ, ಯಾವ ಗೋಶಾಲೆಗಳಲ್ಲಿ ಮೇವು, ನೀರು ಒಳಗೊಂಡ ಸೌಲಭ್ಯ ಇಲ್ಲ, ಗೋಹತ್ಯೆ ನಿಷೇಧ ಕಾಯ್ದೆ ಬಂದ ನಂತರ ಗೋವುಗಳು ಲಕ್ಷದಷ್ಟು ಹೆಚ್ಚಾಗಬೇಕಿತ್ತು ಆದರೆ, ಯಾಕೆ ಆಗಿಲ್ಲ ಎಂದು ಪ್ರಶ್ನಿಸಿದರು.ನಂತರ ಮಾತನಾಡಿದ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ, ಅಮೂಲ್​ನೊಂದಿಗೆ ನಂದಿನಿ ವಿಲೀನ ಹೇಳಿಕೆ ಅಮಿತ್ ಶಾ ನೀಡಿದಾಗ ಈ ವಿವಾದ ಸೃಷ್ಟಿಯಾಯಿತು. ಕೆಎಂಎಫ್ ಬೃಹತ್ ಸಂಸ್ಥೆ. ವಿಲೀನ ಮಾಡಿದರೆ ಹಲವಾರು ಸಮಸ್ಯೆ ಆಗಲಿದೆ, ಹಲವಾರು ಸೌಲಭ್ಯಗಳು, ಸಬ್ಸಿಡಿಗಳು ತಪ್ಪಲಿವೆ ಹಾಗಾಗಿ ವಿಲೀನ ಮಾಡದಂತೆ ಮತ್ತು ಸರ್ಕಾರದ ನಿಲುವು ಸ್ಪಷ್ಟಪಡಿಸಲು ಆಗ್ರಹಿಸಿದರು.


Spread the love

About Laxminews 24x7

Check Also

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*

Spread the loveಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ