Breaking News

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

Spread the love

ಮೈಸೂರು: ಟಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸಂಜೆ ಟಿ.ನರಸೀಪುರ ಹೊರವಲಯದಲ್ಲಿ ಯುವ ಬ್ರಿಗೇಡ್​ನ ಸಕ್ರಿಯ ಸದಸ್ಯ ವೇಣುಗೋಪಾಲ್ ನಾಯಕ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಈ ತಂಡ ಸೋಮವಾರ ಬೆಳಗ್ಗೆ ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ ಎಂಬುವರನ್ನು ಬಂಧಿಸಲಾಗಿದೆ. ಇನ್ನುಳಿದ ನಾಲ್ವರು ಆರೋಪಿಗಳಾದ ಹ್ಯಾರಿಸ್, ಶಂಕರೇಗೌಡ, ಅನಿಲ್ ನಾಯಕ್ ಹಾಗೂ ಮಂಜು ಎಂಬುವರು ತಲೆಮರೆಸಿಕೊಂಡಿದ್ದರು


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ