Breaking News

ಡಿಸಿಸಿ ಬ್ಯಾಂಕಿಗೆ ಈವರೆಗೆ ಅವಿರೋಧ ಆಯ್ಕೆಯಾದವರ ಹೆಸರುಗಳನ್ನು ರಮೇಶ ಕತ್ತಿ ತಿಳಿಸಿದರು.

Spread the love

ಡಿಸಿಸಿ ಬ್ಯಾಂಕಿಗೆ ಈವರೆಗೆ ಅವಿರೋಧ ಆಯ್ಕೆಯಾದವರ ಹೆಸರುಗಳನ್ನು ರಮೇಶ ಕತ್ತಿ ತಿಳಿಸಿದರು.

ಅಪ್ಪಾಸಾಹೇಬ ಮಾರುತಿ ಕುಲಗುಡೆ, ಅಣ್ಣಾಸಾಹೇಬ ಜೊಲ್ಲೆ, ರಮೇಶ ಕತ್ತಿ, ಶಿವಾನಂದ ಡೋಣಿ, ರಾಜೇಂದ್ರ ಅಂಕಲಗಿ, ಆನಂದ ಮಾಮನಿ, ಅಶೋಕ ರಾಜಗೌಡ, ಸುಭಾಷ ಡವಳೇಶ್ವರ, ನೀಲಕಂಠ ಕಪ್ಪಲಗುದ್ದಿ, ಪಂಚನಗೌಡ ದ್ಯಾಮನಗೌಡ ಅವಿರೋಧ ಆಯ್ಕೆಯಾಗಿದ್ದಾರೆ.ಇನ್ನೂ 6 ಕ್ಷೇತ್ರಗಳಿಗೆ ಆಯ್ಕೆಯಾಗಬೇಕಿದ್ದು, ನಾಳೆ ಅವಿರೋಧ ಆಯ್ಕೆ ಮಾಡುವುದಾಗಿ ರಮೇಶ ಕತ್ತಿ ತಿಳಿಸಿದ್ದಾರೆ.ಪಕ್ಷದ ಪರಿವಾರದ ಸೂಚನೆಯಂತೆ ರೈತರ ಏಳಿಗೆಗಾಗಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ ಬ್ಯಾಂಕ್ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ  16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆಸಲು ಪ್ರಯತ್ನಿಸಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿ ಉದ್ದೇಶಿಂದ ಬ್ಯಾಂಕ್ ನಲ್ಲಿ ಅವಿರೋಧ ಆಯ್ಕೆಯಾಗಬೇಕು ಎಂಬುವುದು ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಪಕ್ಷ ಪರಿವಾರ ಸೂಚಸಿದ ಹಿನ್ನೆಲೆ ಅವಿರೋಧ ಆಯ್ಕೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈಗಾಗಲೇ 7 ತಾಲೂಕಿನ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಸಲ್ಲಿಕೆಯಾಗಿವೆ. ಇನ್ನೂ 4 ಕ್ಷೇತ್ರದಲ್ಲಿ ಎರಡು ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಖಾನಾಪುರ, ರಾಮದುರ್ಗ, ಬೈಲಹೊಂಗಲ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿರುವುದರಿಂದ ಆ ಅಭ್ಯರ್ಥಿಯ ಮನವೊಲಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್ ಉಪ ಸಭಾಪತಿ ಆನಂದ ಮಾಮನಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವೆ ಶಶಿಕಲಾ‌ ಜೊಲ್ಲೆ, ಶಾಸಕ ಉಮೇಶ ಕತ್ತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ