Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಟಾಟಾ ಟೆಕ್ನಾಲಜೀಸ್

ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಟಾಟಾ ಟೆಕ್ನಾಲಜೀಸ್

Spread the love

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.

ವಿಧಾನಸೌಧದಲ್ಲಿ ಬುಧವಾರ ಕಂಪನಿಯ ಉನ್ನತ ಅಧಿಕಾರಿಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ.

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್‌ಎಂಇ) ಗಮನದಲ್ಲಿರಿಸಿಕೊಂಡು ಈ ಘಟಕಗಳ ಕೇಂದ್ರಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸುವ ಯೋಜನೆ ಇದ್ದು, ಟಾಟಾ ಟೆಕ್ನಾಲಜೀಸ್ ಶೇಕಡಾ 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇ 30ರಷ್ಟು ಇರಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

ಎಂಎಸ್‌ಎಂಇಗಳಿಗಾಗಿ ಸಿಇಎಫ್‌ಸಿ ಸ್ಥಾಪನೆ ಸಂಬಂಧ ಪ್ರಸ್ತಾವನೆ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ. ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇವುಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ಅಡ್ವಾನ್ಸ್ ಮ್ಯಾನುಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗುತ್ತದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್ ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ವಿವರಿಸಿದರು. ಈ ಪ್ರಸ್ತಾವ‌ ಸ್ವಾಗತಾರ್ಹ. ಸರ್ಕಾರವೂ ಎಂಎಸ್‌ಎಂಇಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು 5 ಎಕರೆಯಷ್ಟು ಜಾಗ ಬೇಕಾಗಿದ್ದು, ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಗು ಆಯುಕ್ತ ಗುಂಜನ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ