Breaking News

ಬಿಜೆಪಿಯವರು ಪ್ರತಿಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮಾಡುತ್ತಾರೆ ಎಂದು ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.

Spread the love

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡಲು ಬಿಜೆಪಿ ಹೈಕಮಾಂಡ್​ಗೆ ಸಾಧ್ಯವಾಗಿಲ್ಲ.

ಮತ್ತೊಂದೆಡೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿವಾರ ಕಳೆದರೂ ಇನ್ನೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಹೆಸರನ್ನು ಕೇಂದ್ರ ನಾಯಕರು ಬಹಿರಂಗಪಡಿಸಿಲ್ಲ.

ಈ ವಿಷಯವಾಗಿಯೇ ಇಂದು ವಿಧಾನಸಭೆಯಲ್ಲಿ ಸ್ವಲ್ಪ ದಿನ ತಟಸ್ಥವಾಗಿರಿ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಆರಂಭದಲ್ಲಿ ಪ್ರತಿಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಾರೆ. ನಂತರ ಎರವಲು ಸೇವೆಯ ಮೇಲೆ ವಿಪಕ್ಷ ನಾಯಕನ ಸ್ಥಾನ ಬಿಟ್ಟುಕೊಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರು ಲೇವಡಿ ಮಾಡಿದರು.

ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಅವರು, ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಕುರಿತು ಚರ್ಚೆ ಮಾಡುವಾಗ, ಬಿಜೆಪಿಯವರು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಕೆಳಗಿಳಿಸಿದರು ಎಂದು ಇದುವರೆಗೆ ಯಾರೂ ಹೇಳಿಲ್ಲ. ಬಿಎಸ್​ವೈ ಅವರನ್ನು ಅಧಿಕಾರದಿಂದ ಇಳಿಸಿರುವುದು ಏಕೆ ಎಂಬುದರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಟ್ಟರೇ, ಬಹುಶಃ ಲಕ್ಷ್ಮಣ್ ಸವದಿ ಬಿಜೆಪಿಯಲ್ಲಿ ಉಪಮುಖ್ಯಮಂತ್ರಿ ಆಗಿದ್ದರು. ಹೀಗಾಗಿ ಅವರಿಗೆ ಮಾಹಿತಿ ಇರಬಹುದು. ಇನ್ನು ಪ್ರಾದೇಶಿಕ ಸರ್ಕಾರವಿರುವ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಿಕೊಂಡಿಲ್ಲ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ