Breaking News

ಟೊಮೆಟೊ ದರ ಗಗನಕ್ಕೆ ಏರುತ್ತಿದ್ದು ದಾಖಲೆ ಬೆಲೆಗೆ ಮಾರಾಟವಾಗುತ್ತಿದೆ.

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಸರಿಯಾದ ಸಮಯಕ್ಕೆ ಬರಲಿಲ್ಲ.

ಮಳೆಯಲ್ಲಿ ಆಶ್ರಯಿಸಿ ಬೆಳೆಯುತ್ತಿದ್ದ ಬೆಳೆಯನ್ನು ರೈತರು ಎಪ್ಪತ್ತರಷ್ಟು ಈಗಾಗಲೇ ಕಳೆದು ಕೊಂಡಿದ್ದಾರೆ. ಇದ್ದಂತಹ ಅಷ್ಟು ಇಷ್ಟು ನೀರಿನಲ್ಲಿ ರೈತರು ತರಕಾರಿ ಬೆಳೆಗಳನ್ನು ಬೆಳೆದಿದ್ದು, ಈಗ ಟೊಮೆಟೊ ದಾಖಲೆಯ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಹೌದು, ಈ ಬಾರಿ ಮುಂಗಾರು ಮಳೆ ರೈತರಿಗೆ ಸರಿಯಾಗಿ ಕೈ ಕೊಟ್ಟಿದೆ. ಸರಿಯಾದ ಸಮಯಕ್ಕೆ ಮಳೆ ಬಾರದ ಹಿನ್ನೆಲೆ ಮಳೆ ಆಶ್ರಹಿಸಿ ಬೆಳೆಯುತ್ತಿದ್ದ ಟೊಮೆಟೊ, ಆಲೂಗಡ್ಡೆ, ಹೂ ಕೋಸು, ಬೀನ್ಸ್, ಬಟಾಣಿ, ಮೆಣಸಿನಕಾಯಿ ಸೇರಿದಂತೆ ಇತರ ತರಕಾರಿ ಬೆಳೆಗಳ ಶೇಕಡಾ 70 ರಷ್ಟು ಭಾಗ ರೈತರು ಈಗಾಗಲೇ ಕಳೆದು ಕೊಂಡಿದ್ದಾರೆ. ಗರಿಷ್ಠ ಪ್ರಮಾಣದಲ್ಲಿ ಬಿತ್ತನೆ ಮಾಡಿದ ತರಕಾರಿ ಬೆಳೆಗಳು ನೀರಿಲ್ಲದೇ ಭೂಮಿಯಲ್ಲಿ ಕರಗಿ ಮಣ್ಣಲ್ಲಿ ಮಣ್ಣಾಗಿ ಹೋಗಿದೆ.

ರೈತರ ಬಳಿ ಇದ್ದ ಅಲ್ಪ ಸ್ವಲ್ಪ ನೀರಿನಲ್ಲಿ ಶೇಕಡಾ 30 ರಷ್ಟು ಬೆಳೆಗಳನ್ನು ಬೆಳೆದಿದ್ದು, ಈಗ ಟೊಮೆಟೊ ಬೆಳೆಗೆ ಚಿಕ್ಕಮಗಳೂರು ಮಾರುಕಟ್ಟೆಯಲ್ಲಿ ಬಾರಿ ಬೆಲೆ ಸಿಗುತ್ತಿದೆ. ಶೇಕಡಾ 100 ರಲ್ಲಿ 70 ರಷ್ಟು ಟೊಮೆಟೊ ಬೆಳೆ ಇಳುವರಿಯಲ್ಲಿ ಕುಂಠಿತವಾಗಿದ್ದು, ಇರುವ ಬೆಳೆಯೇ ದಾಖಲೆ ಪ್ರಮಾಣದ ಬೆಲೆಗೆ ಮಾರಾಟವಾಗುತ್ತಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ