ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ಇಬ್ಬರೂ ಆರೋಪಿಗಳನ್ನು ಪೊಲೀಸರು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಆರೋಪಿಗಳು ಜೈನಮುನಿಯ ಡೈರಿ ಸುಟ್ಟು ಹಾಕಿದ್ದರು. ಸದ್ಯ ಚಿಕ್ಕೋಡಿ ಪೊಲೀಸರು ಡೈರಿಯಲ್ಲಿದ್ದ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಜೈನಮುನಿ ಹತ್ಯೆ ಕೇಸ್‌ನಲ್ಲಿ ಬಂಧಿಸಿದ್ದ ಇಬ್ಬರು ಆರೋಪಿಗಳ ವಿಚಾರಣೆಯೂ ಚುರುಕು ಪಡೆದುಕೊಂಡಿದೆ. ಜೈನ ಮುನಿಯ ಹತ್ಯೆ ಬಳಿಕ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಡೈರಿಯನ್ನು ಸಹ ಅಲ್ಲಿಂದ ಆರೋಪಿಗಳು ಹೊತ್ಯೊಯ್ದಿದ್ದರು. ಅದಾದ ಬಳಿಕ ಜೈನ ಮುನಿಗಳ ದೇಹವನ್ನು ಪೀಸ್ ಪೀಸ್ ಮಾಡಿದ ಸಂದರ್ಭದಲ್ಲಿ ಹಾಕಿಕೊಂಡಿದ್ದ ರಕ್ತಸಿಕ್ತ ಬಟ್ಟೆಗಳ ಜತೆಗೆ ಜೈನ ಮುನಿಯ ಪರ್ಸನಲ್ ಡೈರಿಯನ್ನು ಸಹ ಸುಟ್ಟುಹಾಕಿದ್ರು. ಸದ್ಯ ಚಿಕ್ಕೋಡಿಯ ಡಿವೈಎಸ್‌ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ಆರಂಭಗೊಂಡಿದ್ದು, ಆರೋಪಿಗಳಾದ ನಾರಾಯಣ ಮಾಳೆ ಹಾಗೂ ಹಸನ್‌ಸಾಬ್ ದಲಾಯತ್ ಅವರನ್ನು ತೀವ್ರವಾಗಿ ವಿಚಾರಿಸಿ ಜೈನ ಮುನಿಯ ಡೈರಿಯಲ್ಲಿದ್ದ ವಿಷಯದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಈ ಸಂಬಂಧ ಹಲವು ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಸಹ ಚಿಕ್ಕೋಡಿ ಪೊಲೀಸರು ಕಲೆ ಹಾಕಿದ್ದಾರೆ.
ಪಿನ್ ಟು ಪಿನ್ ಮಾಹಿತಿ ಕಲೆ: ಇನ್ನು, ಜೈನ ಮುನಿಯ ಪರ್ಸನಲ್ ಡೈರಿಯನ್ನು ಸುಟ್ಟುಹಾಕಿರುವ ಸ್ಥಳವನ್ನು ಆರೋಪಿಗಳು ಪೊಲೀಸರಿಗೆ ತೋರಿಸಿದ್ದಾರೆ. ಸುಟ್ಟ ಡೈರಿಯ ಬೂದಿಯನ್ನು ಎಫ್‌ಎಸ್‌ಎಲ್‌ಗೆ ರವಾನಿಸಲು ಚಿಕ್ಕೋಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.