Breaking News

ಬಿಸಿಯೂಟ ಅಡುಗೆ ಸಿಬ್ಬಂದಿ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ

Spread the love

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ.

 

ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು. ಕೈಗಳಲ್ಲಿ ಬಳೆಗಳನ್ನು ತೊಟ್ಟಿರಬಾರದು ಎಂಬುದಾಗಿ ಸೂಚಿಸಲಾಗಿದೆ. ಇದು ಮಹಿಳೆಯರ ಅಸಮಾಧಾನಕ್ಕೂ ಕಾರಣವಾಗಿದೆ.

ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು. ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆಯಬೇಕು. ಗೋಡೆ, ಕಿಟಕಿಗಳಲ್ಲಿ ಹಲ್ಲಿ, ಜೇಡ, ಜಿರಲೆ, ನೋಣಗಳಿಂದ ಮುಕ್ತವಾಗಿರಬೇಕು. ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ತಿಳಿಸಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ