Breaking News

ಜೈನ ಮುನಿ ಹತ್ಯೆ ನಂದಿ ಪರ್ವತ ಆಶ್ರಮಕ್ಕೆ ಸತೀಶ್‌ ಜಾರಕಿಹೊಳಿ ಅವರ ಭೇಟಿ

Spread the love

ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ. ಆರೋಪಿಗಳಿಗೆ ಕಠಿಣ ಕ್ರಮ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈಗಾಗಲೇ ಗೃಹ ಸಚಿವರು ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸಾಕಷ್ಟು ಗಮನ ಹರಿಸಿದೆ.

ಪ್ರಕರಣ ಭೇದಿಸುವಲ್ಲಿ ಪೊಲೀಸರು ತತಕ್ಷಣವೇ ಯಶಸ್ವಿಯಾಗಿದ್ದಾರೆ. ಇಂತಹ ಅಹಿಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಸ್ವಾಮೀಜಿಗಳ ಹತ್ಯೆಯನ್ನು ಎಲ್ಲ ಪಕ್ಷಗಳು ಖಂಡನೆ ಮಾಡಿವೆ. ಪೊಲೀಸರ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಿದ್ದು, ಆರೋಪಿಗಳನ್ನು ಸಹ ಬಂಧಿಸಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ. ಸಿಬಿಐನವರು ಮಾಡುವ ಕೆಲಸವನ್ನು ನಮ್ಮ ಪೊಲೀಸರೇ ಮಾಡಿದ್ದಾರೆ ಎಂದರು ತಿಳಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ