ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ವಾಪಾಸ್ ಪಡೆಯುವುದಿಲ್ಲವೆಂದು ತಿಳಿಸಿದ್ದಾರೆ.
ನನ್ನ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ಮುಖಂಡರೊಂದಿಗೂ ಸಹ ಮಾತನಾಡಿದ್ದೇನೆ. ರೈತರ ಪರ ಕೆಲಸ ಮಾಡಬೇಕು ಎಂಬ ಉದ್ದೇಶ ನನ್ನದಾಗಿದೆ ಎಂದಿದ್ದಾರೆ.
Laxmi News 24×7