ಧಾರವಾಡ : ಮುಂಗಾರು ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಾಡಿಕೊಂಡಿದ್ದು, ಪ್ರವಾಹದ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧವಾಗಿದೆ.
ಹೌದು..ಈಗಾಗಲೇ ಅವಳಿನಗರದಲ್ಲಿ ನಡೆಯುವ ಅಗ್ನಿ ಅವಘಡ ಹಾಗೂ ನೀರಿನಲ್ಲಿ ಬಿದ್ದವರ ರಕ್ಷಣೆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧವಾಗುತ್ತಿದೆ.