Breaking News

ನಟ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಮೋಸದ ಆರೋಪ

Spread the love

ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಹಣ ವಂಚನೆ ಎಸಗಿದ ಆರೋಪದಡಿ ನಿಶಾ ನರಸಿಂಹಪ್ಪ ಎಂಬುವರನ್ನ ಸದಾಶಿವನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿದ್ಯಾರಣ್ಯಪುರ ನಿವಾಸಿಯಾಗಿರುವ ನಿಶಾ ವಿರುದ್ಧ ನಟ ಆನಂದ್ ಪತ್ನಿ ಯಶಸ್ವಿನಿ ದೂರು ನೀಡಿದ ಮೇರೆಗೆ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು‌.

ವಿಚಾರಣೆ ವೇಳೆ ವಂಚನೆ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯನ್ನ ಜೈಲಿಗೆ ಕಳುಹಿಸಲಾಗಿದೆ . ಕಳೆದ‌ ನಾಲ್ಕು ವರ್ಷಗಳಿಂದ ಈವೆಂಟ್ ಮ್ಯಾನೇಜ್​ಮೆಂಟ್ ಕೆಲಸ‌ ಮಾಡುತ್ತಿದ್ದ ನಿಶಾ, ಎನ್​ಎನ್‌ ಪ್ರೊಡಕ್ಷನ್ ಕಂಪನಿ ಸಂಸ್ಥಾಪಕಿಯಾಗಿದ್ದರು. ರಿಯಾಲಿಟಿ ಶೋ ವಿಜೇತೆಯಾಗಿದ್ದ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ಆಯಕ್ಟಿಂಗ್ ಕ್ಲಾಸ್, ಟ್ಯಾಲೆಂಟ್ ಶೋ ಹಾಗೂ ಖಾಸಗಿ ಚಾನೆಲ್​ನಲ್ಲಿ ರಿಯಾಲಿಟಿ ಶೋಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಪೋಷಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಅಲ್ಲದೇ ಮಕ್ಕಳಿಗೆ ಮಿಸ್ ಇಂಡಿಯಾ, ಮಿಸ್ಟರ್ ಇಂಡಿಯಾ ಮಾಡುವುದಾಗಿ ಯುವ ಜನರಿಂದ ಹಣ ಪಡೆದಿದ್ದಾರೆ. ಈವೆಂಟ್ ಮ್ಯಾನೇಜ್ ಮೆಂಟ್ ಮಾಡುವುದಾಗಿ ಸಾರ್ವಜನಿಕರಿಂದ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು‌. ನಿನ್ನೆ ಯಶಸ್ವಿನಿ ನೀಡಿದ ದೂರಿನ‌ ಮೇರೆಗೆ ನಿಶಾಳನ್ನ ಬಂಧಿಸಲಾಗಿದ್ದು, ಜೊತೆಗೆ ಹಣ ಕಳೆದುಕೊಂಡ 17 ಮಂದಿ ಪೋಷಕರು ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ