Breaking News

ಏಕರೂಪ‌ ನಾಗರಿಕ ಸಂಹಿತೆ ಜಾರಿ ಶ್ರೀರಾಮಸೇನೆ ಸಂಪೂರ್ಣ ಬೆಂಬಲ;:ಮುತಾಲಿಕ್​

Spread the love

ಧಾರವಾಡ : ಏಕರೂಪ‌ ನಾಗರಿಕ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ಧಾರವಾಡ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆಗೆ ನಾವು ಬೆಂಬಲ ಸೂಚಿಸುತ್ತೇವೆ. ಇದು ಜಾರಿಗೆ ಬರಬೇಕು. ಇದಕ್ಕಾಗಿ ಜುಲೈ 18 ರಿಂದ ಸಹಿ ಅಭಿಯಾನ ಆರಂಭಿಸುತ್ತೇವೆ. ಅವತ್ತು ಇಡೀ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ಆರಂಭ ಆಗಲಿದೆ ಎಂದರು.

5 ಲಕ್ಷ ಜನರ ಸಹಿ ಸಂಗ್ರಹ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತೇವೆ. ಸ್ವಾಮೀಜಿ, ವಕೀಲರು, ವೈದ್ಯರು ಸೇರಿ ಅನೇಕ ಗಣ್ಯ ನಾಗರಿಕರಿಂದ ಉದ್ಘಾಟನೆ ಮಾಡಲಾಗುವುದು. ಸಂವಿಧಾನದ 44ನೇ ಕಲಂ ಸಮಾನತೆ ಕಾನೂನು ಉಲ್ಲೇಖ ಮಾಡುತ್ತದೆ. 72 ವರ್ಷವಾದರೂ ಸಮಾನ ಕಾನೂನು ಬಂದಿಲ್ಲ. ಇದಕ್ಕೆಲ್ಲ ಕಾಂಗ್ರೆಸ್​ನ ಸಮುದಾಯವೊಂದರ ತುಷ್ಠೀಕರವೇ ಕಾರಣ. ಸುಮಾರು 20 ವರ್ಷಗಳಿಂದ ಹೈಕೋರ್ಟ್, ಸುಪ್ರಿಂಕೋರ್ಟ್ ಸಹ ಇದರ ಜಾರಿ ಬಗ್ಗೆ ಹೇಳುತ್ತ ಬಂದಿವೆ. ಯಾವ ದೇಶದಲ್ಲಿಯೂ ಎರಡು ಕಾನೂನು ಇಲ್ಲ ನಮ್ಮ ದೇಶದಲ್ಲಿ ಮಾತ್ರ ಎರಡು ರೀತಿಯ ಕಾನೂನು ನಡೆಯುತ್ತಿದೆ. ಇವತ್ತು ಇಡೀ ದೇಶದಲ್ಲಿ ಈ ಕಾನೂನಿನ ಬಗ್ಗೆ ಸಕಾರಾತ್ಮಕ ಚರ್ಚೆ ಶುರುವಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ