Breaking News

ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಶಾಸಕರ ಒತ್ತಾಯ

Spread the love

ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡೇರಿ ಸಮೀಪ ಇರುವ ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮಗಳು ನಡೆಯುತ್ತಿದ್ದು, ಅದನ್ನು ತಡೆಗಟ್ಟಬೇಕು ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಆಡಳಿತ ಪಕ್ಷದ ಶಾಸಕ ಶ್ರೀನಿವಾಸಯ್ಯ ಅವರು ಗಣಿ ಮಾಲೀಕರು ತಮಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದರು.

ಇಂದು ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಎಸ್.ಟಿ. ಸೋಮಶೇಖರ್, ಕಲ್ಲು ಗಣಿಗಾರಿಕೆಗಾಗಿ ಪರವಾನಗಿ ಪಡೆದ ಗುತ್ತಿಗೆದಾರರು ಸಂಜೆ 6 ಗಂಟೆ ಮೇಲೆ ಗಣಿ ಸ್ಫೋಟ ಮಾಡುತ್ತಿದ್ದಾರೆ. ಇದರಿಂದ ಅಕ್ಕಪಕ್ಕದ ಗ್ರಾಮಗಳಿಗೆ ತೊಂದರೆಯಾಗುತ್ತಿದ್ದು, ಗಣಿಗಾರಿಕೆಗಾಗಿ ಆಳವಾದ ಗುಂಡಿ ತೋಡಲಾಗುತ್ತಿದೆ. ಅದರಿಂದ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದೇ ಇರುವುದರಿಂದ ಜಾನುವಾರುಗಳು ಬಿದ್ದು ಸಾಯುತ್ತಿವೆ. ನಿಗದಿತ ಪ್ರದೇಶ ಮೀರಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ದೂರಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಕೃಷ್ಣ ಭೈರೇಗೌಡ, ಈ ಹಿಂದೆ ಎಸ್.ಟಿ.ಸೋಮಶೇಖರ್ ಅವರು ಮೂರೂವರೆ ವರ್ಷ ಸಚಿವರಾಗಿದ್ದರು. ಆಗಲೂ ಈ ಗಣಿಗಾರಿಕೆ ನಡೆಯುತ್ತಿತ್ತು. ಪರಿಹಾರ ಕ್ರಮಗಳ ಬಗ್ಗೆ ಸಲಹೆ ನೀಡುವಂತೆ ಮನವಿ ಮಾಡಿದರು. ನೆಲಮಂಗಲ ಶಾಸಕ ಶ್ರೀನಿವಾಸಯ್ಯ ಅವರು ಮಧ್ಯಪ್ರವೇಶಿಸಿ, ತಮ್ಮ ಗ್ರಾಮದಲ್ಲೇ ಈ ಗಣಿಗಾರಿಕೆ ನಡೆಯುತ್ತಿದೆ ಪ್ರಶ್ನೆ ಮಾಡಿದರೆ ದೌರ್ಜನ್ಯ ಮಾಡುತ್ತಾರೆ. ನಮಗೂ ಬೆದರಿಕೆ ಹಾಕಿದ್ದಾರೆ. ಬ್ಲಾಕ್ ಮೇಲ್ ಮಾಡುವುದು ಸೇರಿದಂತೆ ಅನೇಕ ಬಲಪ್ರಯೋಗಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ಇದಕ್ಕೆ ಉತ್ತರಿಸಿದ ಗಣಿ ಸಚಿವ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ, ಗಣಿ ಇಲಾಖೆಯ ನಿರ್ದೇಶಕರನ್ನು ಸ್ಥಳಕ್ಕೆ ಕಳುಹಿಸಿ ವರದಿ ಪಡೆಯಲಾಗುವುದು. ಬಳಿಕ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲು ಚರ್ಚಿಸುವುದಾಗಿ ಭರವಸೆ ನೀಡಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ