Breaking News

ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್​ಪ್ರೆಸ್​​ ರೈಲಿನ ಮೇಲೆ ಕಲ್ಲು ಎಸೆತ..

Spread the love

ಚೆನ್ನೈ: ಮೈಸೂರು- ಚೆನ್ನೈ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ 4.30ಕ್ಕೆ ಮೈಸೂರಿನಿಂದ ಚೆನ್ನೈಗೆ ಆಗಮಿಸಿದ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಪುರಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ.

ಬೇಸಿನ್ ಬ್ರಿಡ್ಜ್ ರೈಲ್ವೇ ಯಾರ್ಡ್ ಅನ್ನು ದಾಟಿ ಸೆಂಟ್ರಲ್ ರೈಲು ನಿಲ್ದಾಣ ತಲುಪುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ಎಸೆದಿದ್ದಾನೆ. ಬಲವಾಗಿ ಕಲ್ಲು ಎಸೆದ ಕಾರಣ ರೈಲಿನ ಎರಡು ಕೋಚ್‌ಗಳ ಕನ್ನಡಿಗಳು ಹಾಳಾಗಿವೆ.

ವಂದೇ ಭಾರತ್​ ರೈಲು ಸೆಂಟ್ರಲ್​ ರೈಲು ನಿಲ್ದಾಣದ ಫ್ಲಾಟ್​ಫಾರ್ಮ್​ನಲ್ಲಿ ಬಂದು ನಿಂತಿದ್ದು, ಪ್ರಯಾಣಿಕರು ರೈಲಿಗೆ ಹತ್ತಿದ್ದಾರೆ. ಆ ವೇಳೆ, ಪ್ರಯಾಣಿಕರು ಬೋಗಿಗಳ ಗಾಜುಗಳು ಒಡೆದು ಕಲ್ಲುಗಳು ಒಳಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಪ್ರಯಾಣಿಕರು ಕೇಂದ್ರ ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೇ ರಕ್ಷಣಾ ಪಡೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಮೀಪದ ಕಣ್ಗಾವಲು ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಬಳಿ ಬೆಳ್ಳಂಬೆಳಗ್ಗೆ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಗಾಜುಗಳನ್ನು ಒಡೆದಿದ್ದಾರೆ. ರೈಲಿಗೆ ಕಲ್ಲು ಎಸೆದವರ ಬಗ್ಗೆ ರೈಲ್ವೆ ರಕ್ಷಣಾ ಪಡೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ ಕಳೆದ ಮಾರ್ಚ್ 28 ರಂದು ಕೂಡ ಚೆನ್ನೈ – ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಎಸ್ 14 ಬೋಗಿಯ ಕನ್ನಡಿ ಕಲ್ಲು ತೂರಾಟ ನಡೆದು ಹಾನಿಗೊಳಗಾಗಿತ್ತು. ಚೆನ್ನೈ- ಮೈಸೂರು ವಂದೇ ಭಾರತ್ ರೈಲು ವಾಣಿಯಂಪಾಡಿ ಪಕ್ಕದಲ್ಲಿ ಚಲಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಆರ್‌ಪಿಎಫ್ ಪೊಲೀಸರು ಆರೋಪಿಯನ್ನು ಜೋಲಾರ್‌ಪೇಟೆಯಲ್ಲಿ ಬಂಧಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ