Breaking News

ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಕಣಕ್ಕಿಳಿಸುವ ಬಗ್ಗೆ ತೀರ್ಮಾನಿಸಿಲ್ಲ,ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ.

Spread the love

ಬೆಳಗಾವಿ: ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಮೊದಲು ಕಾರ್ಯಕರ್ತರಿಗೆ ಆದ್ಯತೆ ಕೊಡುತ್ತೇವೆ. ಅವಶ್ಯಕತೆ ಬಿದ್ದರಷ್ಟೇ ಪುತ್ರಿ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ. ಕೊನೇ ಘಳಿಗೆಯಲ್ಲಿ ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬ್ಲಾಕ್‌ ಅಧ್ಯಕ್ಷರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ ಮತ್ತು ಸಮೀಕ್ಷೆ ವರದಿ ಆಧರಿಸಿ ಮುಂದಿನ 2 ತಿಂಗಳೊಳಗಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ಈಗ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ ಇನ್ನೂ ಆಕಾಂಕ್ಷಿಗಳು ಯಾರೂ ತಮ್ಮ ಹೆಸರು ಕೊಟ್ಟಿಲ್ಲ. ಹಾಗಾಗಿ ಚುನಾವಣೆ ಘೋಷಣೆಯಾಗುವ ಮುನ್ನವೇ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ರವಾನಿಸುತ್ತೇವೆ ಎಂದು ಮಾಹಿತಿ ನೀಡಿದರು.

ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಬೆಳಗಾವಿ ಬರ ಪೀಡಿತ ಜಿಲ್ಲೆಯೆಂದು ಘೋಷಿಸುತ್ತಿರಾ ಎಂಬ ಪ್ರಶ್ನೆಗೆ ಬೆಳಗಾವಿ ಮಾತ್ರವಲ್ಲ, ಇಡೀ ರಾಜ್ಯವನ್ನೇ ಬರಪೀಡಿತ ಎಂದು ಘೋಷಿಸುವ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಮಳೆಯ ಪ್ರಮಾಣ ಆಧರಿಸಿ, ಯಾವ ಜಿಲ್ಲೆಗಳು ಬರಪೀಡಿತ ಪ್ರದೇಶಗಳೆಂದು ಶೀಘ್ರವೇ ಘೋಷಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

 


Spread the love

About Laxminews 24x7

Check Also

ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ

Spread the love ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ