Breaking News
Home / ರಾಜಕೀಯ / ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು

ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು

Spread the love

ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್​ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ‌ ಅಫ್ಸರ್ ಪಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು ಇಡೀ‌ ದಿನ ವಿಚಾರಣೆಗೆ ಒಳಪಡಿಸಿದ್ದರು. ನಂತರ ವಿಶೇಷ‌‌ ವಿಮಾನದಲ್ಲಿ ಹೆಚ್ಚಿನ ವಿಚಾರಣೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಪಾಷಾನನ್ನು ಕರೆದೊಯ್ದಿದ್ದಾರೆ.

ಇನ್ನು, ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ರಾಜ್ಯ ಪೊಲೀಸ್ ಅಧಿಕಾರಿಗಳು ಕಾರಾಗೃಹದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ. ಹೊರಗೆ ವಿವಿಧ ಅಪರಾಧ ಕೃತ್ಯದಲ್ಲಿ ತೊಡಗಿದವರನ್ನು ಹಿಡಿಯಲು ಪೊಲೀಸರು ಹರಹಾಸ ಪಡುತ್ತಾರೆ. ಕೊನೆಗೆ ವಿವಿಧ ಕಡೆಗಳಲ್ಲಿ ಕುಟುಂಬ, ಊರು ನಿದ್ರೆ, ಊಟವನ್ನೇ ಬಿಟ್ಟು ಆರೋಪಿಗಳ ಪತ್ತೆಗೆ ಅಲೆದಾಡಿ, ಕೊನೆಗೆ ಜೀವದ ಹಂಗು ತೊರೆದು ಆರೋಪಿಯನ್ನು ಹಿಡಿದು ಜೈಲಿಗೆ ಕಳುಹಿಸುತ್ತೇವೆ. ಆದರೆ ಜೈಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ವೈಫಲ್ಯದಿಂದಾಗಿ ಕೈದಿಗಳ ಬಳಿ ಮೊಬೈಲ್, ಚಾರ್ಜರ್‌ಗಳು ಪತ್ತೆಯಾಗುತ್ತಿವೆ. ಕಾರಾಗೃಹದ ಸಿಬ್ಬಂದಿಯ ಎಡವಟ್ಟುಗಳಿಂದ ಇಂತಹ ಘಟನೆಗಳು ನಡೆಯುವಂತಾಗುತ್ತವೆ ಎಂದು ಹಿಂಡಲಗಾ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಪೊಲೀಸ್ ಅಧಿಕಾರಿಗಳ ತೀವ್ರ ತರಾಟೆಯಿಂದಾಗಿ ಮೆತ್ತಗಾದ ಹಿಂಡಲಗಾ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲ ಸಮಯ ಮೌನಕ್ಕೆ ಶರಣಾಗಿದ್ದರು. ಬಳಿಕ ಅಧಿಕಾರಿಗಳ ಬಳಿ ವಿಷಾಧ ವ್ಯಕ್ತಪಡಿಸಿ, ಹೆಚ್ಚಿನ ನಿಗಾವಹಿಸುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಜಯೇಶ್ ಪೂಜಾರಿ ಇರುವ ಹಿಂಡಲಗಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಅಲ್ಲಿನ ಸಿಬ್ಬಂದಿ ಹಾಗೂ ಆತನೊಂದಿಗೆ ಸಂಪರ್ಕದಲ್ಲಿರುವ ಬೇರೆ ಕೈದಿಗಳಿಂದ ಆತನ ಕುರಿತು ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಮರಳಿದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ