Breaking News

ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ

Spread the love

ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ ವಿಚಾರ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ? ಎಂದು ಪ್ರಶ್ನಿಸಿದ್ದಾರೆ.

ನಾನು ಸರ್ಕಾರಕ್ಕೆ ಪ್ರಶ್ನೆ ಕೇಳ್ತಿನಿ, ಈ ಹಿಂದೆ ಎಲ್ಲರೂ ಬಳೆ ಹಾಕಿಕೊಂಡು ಕೆಲಸ ಮಾಡಿದಾರೆ. ಅಂದು ಯಾವ ತೊಂದರೆ ಆಗಿಲ್ಲಾ. ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹತ್ತು ಹಲವು ಬೇಕಾದಷ್ಟು ಕೆಲಸಗಳು ಇವೆ. ಇವರು ಕೆಲಸಕ್ಕೆ ಬಾರದ ಕೆಲಸಗಳನ್ನು ಮಾಡ್ತಾ ಎಂದರು.

ಅಧಿಕಾರಿಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗ್ತಾ ಇದೆ: ಪ್ರತಿಪಕ್ಷ ನಾಯಕ ಆಯ್ಕೆ ವಿಚಾರ ಕುರಿತಂತೆ ಮಾತನಾಡಿದ ಅವರು, ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು. ಆದಷ್ಟು ಬೇಗ ಮಾಡ್ತಾರೆ. ನಮ್ಮ ಪಕ್ಷ ನಿರ್ಣಯ ಮಾಡುತ್ತದೆ. 18 ನೇ ತಾರೀಖಿನ ನಂತರ ತೀರ್ಮಾನ ಆಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಪ್ರಿಯಾಂಕ್​ ಖರ್ಗೆ, ಯತೀಂದ್ರ ಸರ್ಕಾರದಲ್ಲಿ ಸ್ಯಾಡೊ ಸಿಎಂ ಆಗಿ ವರ್ತಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೆವು. ಸಿಎಂ ಆಫೀಸ್​ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡ್ತಾ ಇದ್ದಾರೆ. ಸಿಎಂ ವರ್ಗಾವಣೆಯಲ್ಲಿ ನಾನು ಯಾವುದಕ್ಕೂ ಹಣ ತಗೊಂಡಿಲ್ಲಾ ಅಂತಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲಾ ಅಂತಾ ಜಾರಿಕೊಳ್ತಾ ಇದಾರೆ. ಇಡೀ ಅವರ ಸರ್ಕಾರ ಸಚಿವ ಸಂಪುಟದ ಸದಸ್ಯರು, ಭಂಟರು ತಗೊಳ್ತಾ ಇರೋದು ಸ್ಪಷ್ಟವಾಗಿದೆ. ಈ ಬಗ್ಗೆ ಅಧಿಕಾರಿಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗ್ತಾ ಇದೆ ಎಂದು ಬೊಮ್ಮಾಯಿ ಹೇಳಿದ್ರು.

 


Spread the love

About Laxminews 24x7

Check Also

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

Spread the love ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ