ಬೆಳಗಾವಿ: ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಘಟನೆ ನಡೆದಿದ್ದು ಗೋವಾ ಪೊಲೀಸರ ವರ್ತನೆ ಖಂಡಿಸಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರವಾಸಿಗರ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ- ಗೋವಾ ಗಡಿಭಾಗದಲ್ಲಿರುವ ದೂಧ್ ಸಾಗರ ಜಲಪಾತ ಘಟನೆ ನಡೆದಿದ್ದು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ದೂದ್ ಸಾಗರ ನೋಡಲು ಜನಸಾಗರವೇ ಆಗಮಿಸಿದೆ.
ಪ್ರವಾಸಿಗರು ಬರುತ್ತಿದ್ದಂತೆ ದೂಧ್ ಸಾಗರ ಪ್ರವೇಶಕ್ಕೆ ನಿಷೇಧವನ್ನು ಗೋವಾದ ಪೊಲೀಸರು ಹೇರಿದ್ದಾರೆ.ದೂದಸಾಗರದಲ್ಲಿ ಆಳವಾದ ಜಾಗದಲ್ಲಿ ಇಳಿಯದಂತೆ ಪೊಲೀಸರ ಎಚ್ಚರಿಕೆ ವಹಿಸಿದ್ದುದೂಧ್ ಸಾಗರ ಜಲಪಾತದಲ್ಲಿ ಇಳಿಯುವ ಹರಸಾಹಸವನ್ನ ಪ್ರವಾಸಿಗರು ಮಾಡಿದ್ದಾರೆ.
ಈ ವೇಳೆ ಪ್ರವಾಸಿಗರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಗೋವಾ ಪೊಲೀಸರು ಬಸ್ಕಿ ಹೊಡೆಸಿದ್ದಾರೆ. ಪೊಲೀಸರ ವರ್ತನೆ ಖಂಡಿಸಿ ಅಪಾರ ಪ್ರಮಾಣದ ಪ್ರವಾಸಿಗರಿಂದ ರೈಲ್ವೆ ಹಳಿ ಮೇಲೆ ಪ್ರತಿಭಟನೆ ನಡೆಸಿದ್ದಾರೆ.