Breaking News

ಬೆಳಗಾವಿಯಲ್ಲಿ ಭೀಕರ ಹತ್ಯೆ ನಡೆದಿದೆ. ಪತ್ನಿಯ ಎದುರೇ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳ ಕೊಲೆ

Spread the love

ಬೆಳಗಾವಿ: ಪತ್ನಿಯ ಕಣ್ಣೆದುರೇ ಪತಿಯ ಮೇಲೆ‌ ಮಚ್ಚು, ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿರುವ ದುಷ್ಕರ್ಮಿಗಳು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಂಕರ್ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.

ಭೈರನಟ್ಟಿ ಗ್ರಾಮದ ಶ್ರೀಧರ(22) ಬಂಧಿತ ಆರೋಪಿ. ಅಮಾವಾಸ್ಯೆ ಹಿನ್ನೆಲೆ ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕ ಜೊತೆಗೆ ಕೊಲೆಯಾದ ಶಂಕರ್ ಆಗಮಿಸಿದ್ದನು.‌ ದೇವರ ದರ್ಶನ ಪಡೆದ ಬಳಿಕ ವಾಪಸ್ಸು ಬರುತ್ತಿದ್ದ ವೇಳೆ ದೇವಸ್ಥಾನ ಆವರಣದಲ್ಲೇ ಆರೋಪಿ ಶ್ರೀಧರ ದಾಳಿ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದನು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಮೂಡಲಗಿ ಠಾಣೆ ಪೊಲೀಸರು ಆರೋಪಿಗೆ ಬಲೆ ಬೀಸಿದ್ದರು. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿ ಶ್ರೀಧರನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ, ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಹಿಂದೆ ಇನ್ನು ಯಾರಾದರೂ ಇದ್ದಾರಾ ಎಂಬ ಬಗ್ಗೆಯೂ ವಿಚಾರಿಸುತ್ತಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದಿದ್ದಾರೆ.

19 ನೇ ತಾರೀಖಿಗೆ ಮದುವೆಯಾಗಿ 4 ತಿಂಗಳು: ಕಳೆದ ಮೂರು ತಿಂಗಳ ಹಿಂದಷ್ಟೇ ಶಂಕರ್ ಮದುವೆಯಾಗಿತ್ತು. ಇಂದು ದೇವಸ್ಥಾನಕ್ಕೆ ಬಂದಿದ್ದಾಗ ಪತ್ನಿ ಮುಂದೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಪತ್ನಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪತಿಯ ಕೊಲೆಯನ್ನು ಕಣ್ಣಾರೆ ಕಂಡ

ಪ್ರಿಯಾಂಕಾ ಪ್ರತಿಕ್ರಿಯಿಸಿ, “ನಿನ್ನೆ ತಡರಾತ್ರಿ ಪತಿ ನನ್ನ ಬರ್ತ್‌ಡೇ ಆಚರಿಸಿದ್ದರು. ಕುಟುಂಬಸ್ಥರೊಂದಿಗಿದ್ದು ಖುಷಿಪಟ್ಟಿದ್ದರು. ಇಂದು ಬೆಳಗ್ಗೆ ನನ್ನನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು. ಬೈಕ್ ತಿರುಗಿಸಿಕೊಂಡು ಬರ್ತಾರೆ ಅಂತ ನಾನು ಮುಂದೆ ಹೋಗಿ ನಿಂತುಕೊಂಡಿದ್ದೆ. ಅಷ್ಟರಲ್ಲಿ ಲಾಂಗ್ ಹಿಡಿದುಕೊಂಡು ಬಂದ ಒಬ್ಬ ವ್ಯಕ್ತಿ ಗಂಡನ ಮೇಲೆ ಹಲ್ಲೆ ಮಾಡಿ ಪರಾರಿಯಾದ. ನಾನು ಓಡಿ ಹೋಗುವಷ್ಟರಲ್ಲಿ ಅವರು ಕೆಳಗೆ ಬಿದ್ದಿದ್ದರು” ಎಂದು ಘಟನೆಯನ್ನು ವಿವರಿಸಿದರು. “ಮದುವೆಯಾಗಿ ಇದೇ 19ನೇ ತಾರೀಕಿಗೆ ನಾಲ್ಕು ತಿಂಗಳು ಪೂರ್ಣವಾಗುತ್ತಿತ್ತು” ಎಂದು ಅವರು ಕಣ್ಣೀರು ಹಾಕಿದರು.

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ