Breaking News

ವಿವಿಗಳ ಆರ್ಥಿಕ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದ ಬಳಿಕ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ

Spread the love

ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಬಾಕಿ ಪಾವತಿ ಸೇರಿದಂತೆ ಎಲ್ಲ ವಿವಿಗಳ ಆರ್ಥಿಕ ಸಮಸ್ಯೆ ಕುರಿತು ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವಿವಿ ಕುಲಪತಿಗಳು ಹಾಗು ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.

ಎಂ ಸಿ ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಎಸ್ ವಿ ಸಂಕನೂರು ಕುರಿತು ನಿಯಮ 72ರ ಅಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಿಬ್ಬಂದಿಗಳಿಗೆ ವೇತನ ಹಾಗು ನಿವೃತ್ತಿ ವೇತನಕ್ಕೆ ಬೇಕಾದ ಅನುದಾನ ಬಿಡುಗಡೆ ಆಗದೇ ಇರುವುದರಿಂದ ವಿಶ್ವವಿದ್ಯಾಲಯದ ಆರ್ಥಿಕ ಸ್ಥಿತಿ ಕೆಟ್ಟುಹೋಗಿ ವಿಶ್ವವಿದ್ಯಾಲಯದ ಶೈಕ್ಷಣಿಕ ಸಂಶೋಧನಾತ್ಮಕ ಮತ್ತು ಆಡಳಿತಾತ್ಮಕ ನಿರ್ವಹಣೆಯಲ್ಲಿ ತೊಂದರೆಯಾಗುತ್ತಿದೆ. ಸರ್ಕಾರದ ಬಾಕಿ ಹಣ ಪಾವತಿ ಮಾಡದೆ ಇದ್ದರೆ ವಿವಿ ಮುಚ್ಚಬೇಕಾಗಲಿದೆ. ಹಾಗಾಗಿ ಕೂಡಲೇ ಹಣ ಬಿಡುಗಡೆ ಮಾಡಬೇಕು ಎನ್ನುವ ಪ್ರಸ್ತಾಪ ಮಾಡಿದರು.

ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್, ಮಂಜೂರಾತಿ ಹುದ್ದೆಗಳಿಗೆ ಸ್ಯಾಲರಿ ಕಾಂಪೋನೆಂಟ್ ವಿವಿ ಹೆಚ್.ಆರ್.ಎಂ.ಎಸ್ ಮೂಲಕ ಪಾವತಿ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಯವ್ಯಯ ಹಂಚಿಕೆಯಂತೆ ವೇತನ, ವಿಶ್ರಾಂತಿ ವೇತನಕ್ಕಾಗಿ ಒದಗಿಸಲಾದ ಅನುದಾನವನ್ನು ನಿಯಮಾನುಸಾರ ವಿವಿಗೆ ಬಿಡುಗಡೆಗೊಳಿದಲಾಗುತ್ತಿದೆ. ವಿವಿ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಆಡಳಿತ ನಿರ್ವಹಣೆಯು ವಿವಿ ಆಂತರಿಕ ಸಂಪನ್ಮೂಲದಿಂದ ನಿರ್ವಹಿಸಲ್ಪಡುತ್ತಿರುವುದರಿಂದ ವಿವಿ ಆರ್ಥಿಕ ಸ್ಥಿತಿ ಹದಗೆಟ್ಟು ವಿವಿ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಆಡಳಿತ ನಿರ್ವಹಣೆಯಲ್ಲಿ ತೊಂದರೆ ಆಗುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

 


Spread the love

About Laxminews 24x7

Check Also

ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ

Spread the love ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ