ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ಪ್ರಮುಖ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಳೆದ ವಾರದ ಹಿಂದೆ ಚಿಕ್ಕೋಡಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಏಳು ದಿನಗಳವರಿಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಆ ಕಾಲಾವಕಾಶ ಮುಗಿಯುತ್ತಿದ್ದಂತೆ ಇಂದು ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಮತ್ತೆ 5 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದರು.
ಆರೋಪಿತರಾದ ನಾರಾಯಣ ಮಾಳಿ ಹಾಗೂ ಹಸನಸಾಬ್ ದಲಾಯತ ಇಬ್ಬರು ಆರೋಪಿತರನ್ನು ಭಾರಿ ಭದ್ರತೆಯೊಂದಿಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಯಿತು. ಇಬ್ಬರು ಆರೋಪಿತರನ್ನು ಜು.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿಕ್ಕೋಡಿ ಸಿಪಿಐ ಆರ್.ಆರ್ ಪಾಟೀಲ ನೇತೃತ್ವದಲ್ಲಿ ಆರೋಪಿಗಳನ್ನು ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.