Breaking News

ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.

 

ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ಡ್​​​ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

 ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶಅರ್ಚಕರ ಒಕ್ಕೂಟದಿಂದ ಸಚಿವೆಗೆ ಮನವಿ ಪತ್ರ: ಇನ್ನೊಂದೆಡೆ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಕೋರಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ – ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಗೆ (ಡಿಸೆಂಬರ್ 17-2022) ಮನವಿ ಪತ್ರವನ್ನು ಸಲ್ಲಿಸಿತ್ತು.

ವಿಕಾಸಸೌಧದಲ್ಲಿ ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ. ಎಸ್. ಎನ್ ದೀಕ್ಷಿತ್, ಸಚಿವೆಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ದೇವಾಲಯಗಳಲ್ಲಿ ಮೊಬೈಲ್ ಬಳಕೆ ತುಂಬಾ ಅಪಾಯಕಾರಿಯಾಗಿರುತ್ತದೆ. ದೇವಸ್ಥಾನಗಳಲ್ಲಿ ನಡೆಯುತ್ತಿರುವ ಧಾರ್ಮಿಕ ಆಚರಣೆಯ ಮಧ್ಯದಲ್ಲಿ ಅಶ್ಲೀಲವಾದ ರಿಂಗ್ ಟೋನ್‌ಗಳ ಕಿರಿಕಿರಿ, ಭಕ್ತರು ಧ್ಯಾನಾಸ್ತಕರಾಗಿ ಧ್ಯಾನ ಮಾಡುವಾಗ ಕೆಲವು ಹೆಣ್ಣು ಮಕ್ಕಳ ಫೋಟೋ ತೆಗೆಯುವುದು, ಜೋರಾಗಿ ಮಾತನಾಡುವುದು, ದೇವರ ಫೋಟೋ ತೆಗೆಯುವುದು, ಅರ್ಚನೆ ಮಾಡುತ್ತಿರುವಾಗ ಮಂತ್ರಗಳ ಉಚ್ಛಾರಣೆ ಮಾಡುವಾಗ ಮೊಬೈಲ್‌ನಲ್ಲಿ ಹಾಡುಗಳನ್ನು ಹಾಕುವುದು, ದೇವರ ಮೇಲಿರುವ ಆಭರಣಗಳ ಫೋಟೋ, ಇತ್ತೀಚೆಗೆ ಸೆಲ್ಫಿ ಫೋಟೋ, ದೇವರ ಗರ್ಭಗುಡಿಗೆ ಬೆನ್ನು ಹಾಕಿ ಫೋಟೋ ತೆಗೆಯುವುದು, ದೇವಾಲಯಗಳ ಆವರಣದಲ್ಲಿ ಇಟ್ಟಿರುವ ಹುಂಡಿಗಳ ಫೋಟೋ ತೆಗೆಯುವುದು ಹೆಚ್ಚಾಗಿದೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿತ್ತು.

ದೇವಸ್ಥಾನಗಳಲ್ಲಿ ಹೋಮ, ಹವನ, ಪೂಜೆ, ಜಪ, ತಪ ಇತ್ಯಾದಿಗಳಲ್ಲಿ ನಿರತರಾಗಿರುವಾಗ ಮಂತ್ರ ಪುಷ್ಪ ಅಭಿಷೇಕಾಧಿ ಧಾರ್ಮಿಕ ಕಾರ್ಯಗಳಲ್ಲಿ ಮೊಬೈಲ್‌ಗಳನ್ನು ಬಳಕೆ ಮಾಡಿದರೆ ಪೂಜೆಯ ಏಕಾಗ್ರತೆ ತಪ್ಪುತ್ತದೆ. ಇದರಿಂದ ಭಕ್ತರ ಏಕಾಗ್ರತೆಗೆ ಧಕ್ಕೆ ಉಂಟಾಗುತ್ತದೆ. ಭಕ್ತಿಯಿಂದ ಪೂಜಿಸಲು ಬರುವ ಭಕ್ತರಿಗೆ ದೇವಸ್ಥಾನ ವ್ಯವಸ್ಥೆಯ ಬಗ್ಗೆ ತಪ್ಪು ಭಾವನೆಗಳು ಹಾಗೂ ತಪ್ಪು ಕಲ್ಪನೆಗಳು ಮೂಡುವ ಸಂಭವ ಇದೆ ಎಂದು ಆತಂಕ ವ್ಯಕ್ತಪಡಿಸಿತ್ತು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ