Breaking News

ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.

Spread the love

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿತು.

 

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಈ ಬಿಲ್‌ಅನ್ನು ತರಾತುರಿಯಲ್ಲಿ ತಂದಿಲ್ಲ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ ಕಾನೂನು ತಂದಿತ್ತು.‌ ಇದರಿಂದ ರೈತರಿಗೆ ಲಾಭ ಆಗಿಲ್ಲ. ಇದರಿಂದ ರಿಲಯಾನ್ಸ್, ಡಿಮಾರ್ಟ್ ನಂತವರಿಗೆ ಲಾಭ ಆಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ‌ಕಾನೂನನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಹೀಗಿದ್ದರೂ, ರಾಜ್ಯದಲ್ಲಿ ಈ ಕಾನೂನು ಹಿಂಪಡೆದಿರಲಿಲ್ಲ. ಕೇಂದ್ರ ವಾಪಸ್ ಪಡೆದರೂ ರಾಜ್ಯ ವಾಪಸ್ ಪಡೆದಿಲ್ಲ.‌ ಇದರಿಂದ ರೈತರಿಗೆ ತೊಂದರೆ ಆಗುತ್ತಿತ್ತು. ಈ ಕಾರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

ಈ ತಿದ್ದುಪಡಿ ವಿಧೇಯಕದಿಂದ ರೈತರಿಗೆ ಅನುಕೂಲ ಆಗಲ್ಲ: ಈ ಬಗ್ಗೆ ಮಾತನಾಡಿದ ಮಾಜಿ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್, ಎಪಿಎಂಸಿ ಬಗ್ಗೆ ಅಧ್ಯಯನ ಮಾಡಿದರೆ ಕಾನೂನು‌ ವಾಪಸ್ ಪಡೆಯುತ್ತಿರಲಿಲ್ಲ. ಎಪಿಎಂಸಿಯನ್ನು ರೈತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಆರಂಭ ಮಾಡಿದ್ದು. ರೈತರ ಬೆಳೆಯನ್ನು ಯಾವಾಗ ಎಲ್ಲಿ ಯಾರಿಗೆ ಬೇಕಾದರೂ ಮಾರಾಟ ಮಾಡಲು ಅವಕಾಶ ಇತ್ತು. ಈ ನಿಟ್ಟಿನಲ್ಲಿ ರೈತರಿಗೆ ಅನುಕೂಲ ತರುವ ನಿಟ್ಟಿನಲ್ಲಿ ಕಾನೂನು ಜಾರಿಗೆ ತರಲಾಗಿತ್ತು ಎಂದರು.

ಈ ತಿದ್ದುಪಡಿ ವಿಧೇಯಕದಿಂದ ರೈತರಿಗೆ ಅನುಕೂಲ ಆಗಲ್ಲ, ಬದಲಾಗಿ ದಲ್ಲಾಳಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕಾನೂನು‌ ತಿದ್ದುಪಡಿ ಮಾಡಲಾಗಿದೆ ಎಂದರು. ಯಾರ ಜೊತೆಗೆ ಚರ್ಚೆ ಮಾಡದೆ ಈ ತಿದ್ದುಪಡಿ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇನ್ನು ತಿದ್ದುಪಡಿ ಕಾನೂನಿನ ಪ್ರಕಾರ ಎಪಿಎಂಸಿ ಹೊರತಾಗಿ ಬೇರೆ ಬೇರೆ ಖರೀದಿದಾರರಿಗೆ ಬೆಳೆ ಮಾರಾಟ ಮಾಡಿದ್ದಲ್ಲಿ ಆರು ತಿಂಗಳ ಅವಧಿಗೆ ಜೈಲು, ಐದು ಸಾವಿರ ದಂಡ ಹಾಕುವ ಅವಕಾಶ ಇದೆ ಎಂದು ಟೀಕಿಸಿದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ