Breaking News

ಮಹಾಘಟಬಂಧನ್ ಸಭೆ: ಹೋಟೆಲ್ ಸುತ್ತ ರಾರಾಜಿಸುತ್ತಿವೆ ರಾಷ್ಟ್ರೀಯ ನಾಯಕರ ಪೋಸ್ಟರ್ಸ್​

Spread the love

ಬೆಂಗಳೂರು : ಮಹಾಘಟಬಂಧನ್ ನಾಯಕರ ಸಭೆ ನಡೆಯುತ್ತಿರುವ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ಸುತ್ತಮುತ್ತ ರಾಷ್ಟ್ರೀಯ ನಾಯಕರ ಪೋಸ್ಟರ್​ಗಳು ರಾರಾಜಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮೇರೆಗೆ ಎರಡನೇ ಸಭೆ ನಗರದ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಡೆಯುತ್ತಿದೆ.

ಸಭೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಅಭಿಷೇಕ್‌ ಬ್ಯಾನರ್ಜಿ, ಡೆರಿಕ್‌ ಓಬ್ರಿಯಾನ್‌, ಸಿಪಿಐನ ಡಿ.ರಾಜಾ, ಸಿಪಿಐಎಂ ಸೀತಾರಾಂ ಯೆಚೂರಿ, ಎನ್‌ಸಿಪಿ ಶರದ್‌ ಪವಾರ್‌, ಜಿತೇಂದ್ರ ಅಹ್ವಾಡ್‌, ಸುಪ್ರಿಯಾ ಸುಳೆ, ಜೆಡಿಯು ನಿತೀಶ್‌ ಕುಮಾರ್‌, ಸಂಜಯ್‌ ಕುಮಾರ್‌ ಝಾ, ಡಿಎಂಕೆಯ ಎಂ. ಕೆ. ಸ್ಟಾಲಿನ್‌, ಟಿ.ಆರ್‌. ಬಾಲು, ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಜೆಎಂಎಂ ಹೇಮಂತ್‌ ಸೊರೇನ್‌, ಶಿವಸೇನಾ(ಉದ್ಧವ್‌ ಠಾಕ್ರೆ ಬಣ) ಉದ್ಧವ್‌ ಠಾಕ್ರೆ, ಆದಿತ್ಯ ಠಾಕ್ರೆ, ಸಂಜಯ್‌ ರಾವತ್‌, ಆರ್‌ಜೆಡಿ ಲಾಲು ಪ್ರಸಾದ್‌ ಯಾದವ್‌, ತೇಜಸ್ವಿ ಯಾದವ್‌, ಮನೋಜ್‌ ಝಾ, ಸಂಜಯ್‌ ಯಾದವ್‌, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ರಾಮಗೋಪಾಲ್‌, ಜಾವೇದ್‌ ಅಲಿ ಖಾನ್‌, ಆಶಿಶ್‌ ಯಾದವ್‌, ನ್ಯಾಷನಲ್‌ ಕಾನ್ಫರೆನ್ಸ್‌- ಓಮರ್‌ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಸಿಪಿಐ(ಎಂಎಲ್‌) ದೀಪಂಕರ್‌ ಭಟ್ಟಾಚಾರ್ಯ, ಆರ್‌ಎಲ್‌ಡಿಯ ಜಯಂತ್‌ ಸಿಂಗ್‌ ಚೌದರಿ, ಐಯುಎಂಎಲ್‌ನ ಪಿ. ಕುನಲಿಕುಟ್ಟಿ, ಕೇರಳ ಕಾಂಗ್ರೆಸ್‌(ಎಂ)ನ ಜೋಶ್‌ ಕೆ. ಮಣಿ, ಎಂಡಿಎಂಕೆಯ ವೈಕೋ, ವಿಸಿಕೆಯ ರವಿಕುಮಾರ್‌, ಆರ್‌ಎಸ್‌ಪಿಯ ಎನ್‌. ಕೆ. ಪ್ರೇಮಚಂದ್ರನ್‌, ಕೇರಳ ಕಾಂಗ್ರೆಸ್‌ನ ಪಿ.ಸಿ. ಜೋಸೆಫ್‌, ಕೆಎಂಡಿಕೆಯ ಈಶ್ವರನ್‌, ಎಐಎಫ್‌ಬಿಯ ಜಿ. ದೇವರಾಜನ್‌ ಭಾವಚಿತ್ರಗಳು ಹೋಟೆಲ್ ಮುಂಭಾಗದ ರಸ್ತೆಯ ಇಕ್ಕೆಲಗಳಲ್ಲಿಯೂ ರಾರಾಜಿಸುತ್ತಿದೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ