Breaking News

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು ಮಂಜೂರು

Spread the love

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ವಿನೋದ್ ತೋಮರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

 

ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮಂಜೂರಿಗೆ ಮನವಿ ಮಾಡಿದರು. ಈ ಸಾಮಾನ್ಯ ಜಾಮೀನು ವಿಚಾರಣೆಯನ್ನು ಜುಲೈ 20ರಂದು ನಡೆಯಲಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ಬ್ರಿಜ್ ಭೂಷಣ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಇದೇ ವೇಳೆ, ಭಾರತೀಯ ಕುಸ್ತಿ ಫೆಡರೇಶನ್​ನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್​ಗೆ ಮಧ್ಯಂತರ ಜಾಮೀನು ನೀಡಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ