Breaking News
Home / ರಾಜಕೀಯ / ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಭೆ ದೀರ್ಘಾವಧಿ ಮೈತ್ರಿ ಎಂದ ಪ್ರಧಾನಿ ಮೋದಿ

ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಭೆ ದೀರ್ಘಾವಧಿ ಮೈತ್ರಿ ಎಂದ ಪ್ರಧಾನಿ ಮೋದಿ

Spread the love

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸರಿ ಸುಮಾರು 10 ತಿಂಗಳು ಬಾಕಿಯಾಗಿದೆ. ಆದರೆ, ಈಗಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ.

ಬೆಂಗಳೂರಿನಲ್ಲಿ ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟವು ಎರಡು ದಿನಗಳ ಮಹತ್ವದ ಸಭೆ ನಡೆಸಿದೆ. ಮತ್ತೊಂದೆಡೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಭೆ ಆರಂಭವಾಗಿದೆ.

ಕಾಂಗ್ರೆಸ್​ 26 ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ತನ್ನ ಬಲ ಪ್ರರ್ದಶನ ಮಾಡಿದೆ. ಬಿಜೆಪಿಯು ತನ್ನ ಮೈತ್ರಿಕೂಟದ ಶಕ್ತಿಯ ಮಹಾ ಪ್ರದರ್ಶನವನ್ನು ನಡೆಸುತ್ತಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿರುವ ಈ ಸಭೆಯಲ್ಲಿ ಆಡಳಿತಾರೂಢ ಎನ್‌ಡಿಎಯ 38 ಪಕ್ಷಗಳು ಪಾಲ್ಗೊಂಡಿವೆ. ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಮೊದಲ ಸಭೆ ಇದಾಗಿದೆ.

 

ಈ ಸಭೆಗೂ ಮುನ್ನ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾರತದಾದ್ಯಂತದ ನಮ್ಮ ಮೌಲ್ಯಯುತ ಎನ್‌ಡಿಎ ಪಾಲುದಾರರು ಭಾಗವಹಿಸುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ. ನಮ್ಮದು ದೀರ್ಘಾವಧಿಯ ಉಪಯುಕ್ತವಾದ ಮೈತ್ರಿಯಾಗಿದ್ದು, ಅದು ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಮತ್ತು ಪ್ರಾದೇಶಿಕ ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ