Breaking News
Home / ನವದೆಹಲಿ / ವಿಶ್ವಕಪ್​ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

ವಿಶ್ವಕಪ್​ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

Spread the love

ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ.

ಅವರು ಈ ವರ್ಷ ನ್ಯೂಜಿಲ್ಯಾಂಡ್​ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

ನ್ಯೂಜಿಲ್ಯಾಂಡ್​​​​ನಲ್ಲಿ ಜಸ್ಪ್ರಿತ್ ಬುಮ್ರಾಗೆ ಸರ್ಜರಿ: ಈ ಕ್ರಮದಲ್ಲಿ ಟೀಂ ಇಂಡಿಯಾಗೆ ಶೀಘ್ರದಲ್ಲೇ ಪುನರಾಗಮನ ಮಾಡುವುದಾಗಿ ಬುಮ್ರಾ ಸುಳಿವು ನೀಡಿದ್ದಾರೆ. ಬುಮ್ರಾ ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಭಾವನಾತ್ಮಕ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಅವರ ಅಭ್ಯಾಸದ ದೃಶ್ಯಗಳಿವೆ. ಈ ಟೀಂ ಇಂಡಿಯಾ ವೇಗಿ ವಿಡಿಯೋಗೆ ‘ಕಮಿಂಗ್ ಹೋಮ್’ ಎಂದು ಶೀರ್ಷಿಕೆ ನೀಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಿಂದ ಬುಮ್ರಾ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ ಆಡಿದ ಅವರು ಎರಡನೇ ಪಂದ್ಯದಲ್ಲಿ ಗಾಯಗೊಂಡಿದ್ದರು. ಅಂದಿನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಬುಮ್ರಾ ಏಷ್ಯಾಕಪ್, ಟಿ-20 ವಿಶ್ವಕಪ್, ಐಪಿಎಲ್, ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡಿರಲಿಲ್ಲ.

ಅಭ್ಯಾಸದ ಅವಧಿಯಲ್ಲಿ 8-10 ಓವರ್ ಬೌಲಿಂಗ್: ಆದರೆ, ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್‌ಗೆ ಬುಮ್ರಾ ಲಭ್ಯವಾಗುವ ಸಾಧ್ಯತೆಯಿದೆ. ಬುಮ್ರಾ ಅನುಪಸ್ಥಿತಿಯು ಭಾರತ ತಂಡದಲ್ಲಿ ಸರಿಯಾದ ವೇಗಿಗಳ ಕೊರತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಆದರೆ, ಸದ್ಯ ಬುಮ್ರಾ ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಅವರು ಅಭ್ಯಾಸದ ಅವಧಿಯಲ್ಲಿ 8-10 ಓವರ್ ಬೌಲಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ