Breaking News

ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ : ಯತ್ನಾಳ್‌

Spread the love

ಮೈಸೂರು : ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ತಿ.‌ ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೂಂಡಾಗಿರಿ ವಾತಾವರಣವಿದೆ.

ಹಿಂದೂಗಳು ಜೀವನ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಹನುಮ ಜಯಂತಿ ಮಾಡುವುದು ಕೆಲವು ಜನರಿಗೆ ಭಯ ಹುಟ್ಟಿಸಿದೆ. ಕೇಸರಿ ಶಾಲು, ತಿಲಕ ಹಾಕಿಕೊಂಡರೆ ಹುಷಾರ್ ಅಂತ ರಾಜ್ಯದ ಮಂತ್ರಿ ಪೊಲೀಸರಿಗೆ ಹೇಳುತ್ತಾರೆ. ಇದೇನೂ ಪಾಕಿಸ್ತಾನವಾ ಎಂದು ಖಾರವಾಗಿ ಪ್ರಶ್ನಿಸಿದರು.

ಹಿಂದೂ ಸಮಾಜ ಉಳಿಸಲು ಶ್ರೀಮಂತರ ಮಕ್ಕಳು ಬರಲ್ಲ. ಹಿಂದೂ ಸಮಾಜ ಉಳಿಸುತ್ತಿರೋರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು. ಗಣಪತಿ ಕೂರಿಸಲು ಹಿಂದಿನ ಸರ್ಕಾರದ ಅವಧಿಯಲ್ಲಿ ಹಲವು ನಿರ್ಬಂಧ ಹೇರಲಾಗಿತ್ತು. ಆಗ ಸಿಎಂ ಬೊಮ್ಮಾಯಿಗೆ ಫೋನ್ ಮಾಡಿ ನೀವು ಕರ್ನಾಟಕದ ಸಿಎಂ ಹ್ಹಾ ಅಥವಾ ಲಾಹೋರ್ ಸಿಎಂ ಹ್ಹಾ ಅಂತ ಪ್ರಶ್ನಿಸಿದ್ದೆ ಎಂದು ತಿಳಿಸಿದರು.

ಹಿಂದೂ ಕಾರ್ಯಕರ್ತರು ಯಾವುದೇ ಸಂಧಾನಕ್ಕೂ ಒಬ್ಬರೇ ಹೋಗಬೇಡಿ. ಪೊಲೀಸರನ್ನು ಹೇಗೆ ಉಪಯೋಗಿಸಿ ಕೊಳ್ಳಬೇಕು ಎಂದು ಯುಪಿ ಸಿಎಂ ನೋಡಿ ಕಲಿಯಬೇಕು. ಹಿಂದೂ ಧರ್ಮದ ಮೇಲೆ ಬಹು ವರ್ಷದಿಂದ ಸಂಘರ್ಷ ನಡೆದಿದೆ. ಸಂವಿಧಾನವನ್ನೇ ಬದಲಾಯಿಸುತ್ತಾರೆ ಎಂದು ಸುಳ್ಳು ಹಬ್ಬಿಸುತ್ತಾರೆ. ಸೂರ್ಯ-ಚಂದ್ರ ಇರುವವರೆಗೂ ಸಂವಿಧಾನ ಇರುತ್ತದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ