Breaking News

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.: ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

 

ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ